ಸಾರಾಂಶ
ಶಾಲೆಯ ಬೀಗ ಮುರಿದು ಲ್ಯಾಪ್‌ಟಾಪ್ ಮತ್ತು ನಗದು ಕಳವುಗೈದಿರುವ ಘಟನೆ ನಡೆದಿದೆ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಶಾಲೆಯ ಬೀಗ ಮುರಿದು ಲ್ಯಾಪ್‌ಟಾಪ್ ಮತ್ತು ನಗದು ಕಳವುಗೈದಿರುವ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.
ಡಿ. 30ರ ಸಂಜೆ 4:30 ಗಂಟೆಯಿಂದ ಡಿ. 31ರ ಬೆಳಗ್ಗೆ 9 ಗಂಟೆಯ ಮಧ್ಯವಾಧಿಯಲ್ಲಿ ಯಾರೋ ಅಪರಿಚಿತರು ಶಾಲೆಯ ಕಚೇರಿಯ ಬೀಗವನ್ನು ಮುರಿದು ಒಳಪ್ರವೇಶಿಸಿ ಅಂದಾಜು 38,000 ರು. ಮೌಲ್ಯದ ASUS ಕಂಪನಿಯ ಲ್ಯಾಪ್ ಟಾಪ್ ಹಾಗೂ ಮೇಜಿನ ಡ್ರಾವರ್‌ನಲ್ಲಿದ್ದ ಶಾಲೆಗೆ ಸಂಬಂಧಿಸಿದ 1,700 ರು. ಕಳವುಗೈದಿದ್ದಾರೆ. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ಅವರು ನೀಡಿದ ದೂರಿನಂತೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.-------------------------------
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ನೀಡಿ: ಉದಯಕುಮಾರ್ ಶೆಟ್ಟಿ ಒತ್ತಾಯಕನ್ನಡಪ್ರಭ ವಾರ್ತೆ ಉಡುಪಿರಾಜ್ಯದಲ್ಲಿ ಆತ್ಮಹತ್ಯೆ ಹಾಗೂ ಬಾಣಂತಿ ಸಾವುಗಳ ಸಂಖ್ಯೆ ಹೆಚ್ಚಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪೈಪೋಟಿಗೆ ಬಿದ್ದಂತಿದೆ. ಇತಿಹಾಸದಲ್ಲೇ ಈ ರೀತಿಯ ದುರಂತ ಆಡಳಿತವನ್ನು ರಾಜ್ಯ ಹಿಂದೆಂದೂ ಕಂಡಿರಲಿಲ್ಲ. ರಾಜ್ಯದಲ್ಲಿ ಮಹಿಳೆಯರು ಹೆರಿಗೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುತ್ತಿಗೆದಾರ ಸಚಿನ್ ಅವರ ಡೆತ್ ನೋಟ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರಿದೆ, ಆದರೂ ಪ್ರಿಯಾಂಕ್ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತಪ್ಪನ್ನು ಸಮರ್ಥಿಸುತ್ತಿದ್ದಾರೆ ಎಂದು ಕಿಡಿಕಾರಿದರು.ರಾಜ್ಯದಲ್ಲಿ ಬಾಣಂತಿ ಸಾವು ಮತ್ತು ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಉನ್ನತ ತನಿಖೆಯಾಗಬೇಕು. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೇಳಿದರು.ಈ ಸಂದರ್ಭ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ವಕ್ತಾರ ವಿಜಯ್ ಕುಮಾರ್ ಉದ್ಯಾವರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.