ಲಾಸ್ಯ 2025 ನೃತ್ಯ ಸ್ಪರ್ಧೆ: ಸುರತ್ಕಲ್ ಬಂಟರ ಸಂಘ ಪ್ರಥಮ

| Published : Sep 08 2025, 01:01 AM IST

ಸಾರಾಂಶ

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ನಡೆದ ‘ಲಾಸ್ಯ 2025’ ಬಂಟರ ನೃತ್ಯ ಸ್ಫರ್ಧೆಯಲ್ಲಿ 50 ಸಾವಿರ ರು. ನಗದು, ಪ್ರಶಸ್ತಿ ಪತ್ರದೊಂದಿಗೆ ಸುರತ್ಕಲ್ ಬಂಟರ ಸಂಘ ಪ್ರಥಮ ಸ್ಥಾನ ಗಳಿಸಿದೆ.

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ನಡೆದ ‘ಲಾಸ್ಯ 2025’ ಬಂಟರ ನೃತ್ಯ ಸ್ಫರ್ಧೆಯಲ್ಲಿ 50 ಸಾವಿರ ರು. ನಗದು, ಪ್ರಶಸ್ತಿ ಪತ್ರದೊಂದಿಗೆ ಸುರತ್ಕಲ್ ಬಂಟರ ಸಂಘ ಪ್ರಥಮ ಸ್ಥಾನ ಗಳಿಸಿದೆ.

ಸುರತ್ಕಲ್ ಬಂಟರ ಸಂಘದ 32 ಮಂದಿ ಸದಸ್ಯರು ರಾಜಸ್ತಾನಿ ನೃತ್ಯ ಪ್ರದರ್ಶಿಸುವ ಮೂಲಕ ಜನ‌ರ ಮೆಚ್ಚುಗೆ ಪಡೆಯಿತು. ಬಳಿಕ ನಡೆದ ಪ್ರಶಸ್ತಿ ಪ್ರದಾನ‌ ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಶಸ್ತಿ ವಿತರಿಸಿದರು.ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ದೇವೇಂದ್ರ ಶೆಟ್ಟಿ, ಆಶಾಕಿರಣ್ ರೈ ಪ್ರಶಸ್ತಿ ಸ್ವೀಕರಿಸಿದರು. ನಿಕಟ ಪೂರ್ವ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಸುರತ್ಕಲ್ ಬಂಟರ ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕಾರ್ಯಕಾರಿ ಸಮಿತಿ ಸದಸ್ಯರಾದ ಗಿರೀಶ್ ಎಂ ಶೆಟ್ಟಿ, ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜ ಟಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ಡಿ. ಶೆಟ್ಟಿ ಇದ್ದರು. ಲಾಸ್ಯ 2025 ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ ಪ್ರಶಸ್ತಿಯನ್ನು ಎಕ್ಕಾರ್ ಬಂಟರ ಸಂಘ ಹಾಗೂ ತೃತೀಯ ಪ್ರಶಸ್ತಿಯನ್ನು ಮೂಡುಬಿದಿರೆ ಬಂಟರ ಸಂಘ ಪಡೆಯಿತು.‌