Launch of a booklet on Ambedkar's perspective on the media sector

- ಹಿರಿಯ ಪತ್ರಕರ್ತ ರವಿಕುಮಾರ್‌ ಟೆಲೆಕ್ಸ್‌ ಅವರ ಕೃತಿ । ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ

ಕನ್ನಡಪ್ರಭ ವಾರ್ತೆ ಬೆಂಗಳೂರು

ಹಿರಿಯ ಪತ್ರಕರ್ತ ಎನ್‌.ರವಿಕುಮಾರ್ ಟೆಲೆಕ್ಸ್‌ ಅವರ ‘ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ಎಂಬ ಕಿರು ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬಿಡುಗಡೆ ಮಾಡಿದರು.

ನಗರದ ಕಬ್ಬನ್‌ಪಾರ್ಕ್‌ನಲ್ಲಿನ ಸರ್ಕಾರಿ ನೌಕರರ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ ಹಾಗೂ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪುಸ್ತಕ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಮೀಸಲಾತಿ ನೀಡಿದ್ದಾರೆ. ಆದರೆ ಪತ್ರಿಕಾ ರಂಗದಲ್ಲಿ ಮೀಸಲಾತಿ ಇಲ್ಲ. ಹೀಗಾಗಿ ಎಸ್ಸಿ, ಎಸ್ಟಿ, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಪತ್ರಿಕಾರಂಗದಲ್ಲಿ ಕಡಿಮೆ ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇವರಿಗೆ ಸಮಾನ ಅವಕಾಶಗಳು ದೊರೆತಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ರೂಪುಗೊಳ್ಳುತ್ತಿದ್ದರು. ನಾವ್ಯಾರೂ ಅವರಿಗಿಂತಲೂ ಕಡಿಮೆ ಇಲ್ಲ. ಆದರೆ ಅವಕಾಶಗಳಿಂದ ವಂಚಿತರಾಗಿದ್ದೇವೆ ಅಷ್ಟೇ ಎಂದರು.

---------ಸಿದ್ದು ಫೋಟೋ....