ಸಾರಾಂಶ
ತಾಯಿ ಹೆಸರಿನಲ್ಲಿ ಒಂದು ಸಸಿ ಹಾಗೂ ಬೀಜದುಂಡೆ ಕಾರ್ಯಕ್ರಮ ಯರಪಾರೆ ಅರಣ್ಯದಲ್ಲಿ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಇಕೋ ಕ್ಲಬ್ ವತಿಯಿಂದ ತಾಯಿ ಹೆಸರಿನಲ್ಲಿ ಒಂದು ಸಸಿ ಹಾಗೂ ಬೀಜದುಂಡೆ ಕಾರ್ಯಕ್ರಮ ತಾಲೂಕಿನ ಯರಪಾರೆ ಅರಣ್ಯದಲ್ಲಿ ಈಚೆಗೆ ನಡೆಯಿತು.ಕಾರ್ಯಕ್ರಮಕ್ಕೆ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರಕುಮಾರ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ನಂತರ ಸಸಿ ನೆಡುವ ವಿಧಾನ ಮತ್ತು ಅದರಿಂದಾಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಅರಣ್ಯ ಇಲಾಖೆಯ ಶ್ರವಣ್, ಲೋಹಿತ್, ಕಿರಣ್ ಹಾಗೂ ವಿದ್ಯಾರ್ಥಿಗಳು ಇದ್ದರು.