Launch of a screening program under 'Arogya Sanjeevini'

ಯಾದಗಿರಿ: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಯಿಮ್ಸ್ ಆಸ್ಪತ್ರೆ, ಯಾದಗಿರಿಯಲ್ಲಿ ವಾರ್ಷಿಕ ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ ಗುರುವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಜಿಲ್ಲಾ ನೋಡಲ್ ಅಧಿಕಾರಿಗಳು ಎ.ಬಿ.ಆರ್.ಕೆ. ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ. ಪದ್ಮಾನಂದ ಗಾಯಕ್ವಾಡ ಚಾಲನೆ ನೀಡಿದರು. ಯಿಮ್ಸ್ ಯಾದಗಿರಿಯ ಜಿಲ್ಲಾ ವೈದ್ಯಕೀಯ ಅಧೀಕ್ಷಕ ಡಾ. ಸಂತೋಷ ಲಕ್ಷ್ಮಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯಾದಗಿರಿಯ ಜಿಲ್ಲಾ ಸಂಯೋಜಕರಾದ ಡಾ. ಶ್ವೇತಾ, ಆರೋಗ್ಯ ಮಿತ್ರರು ಹಾಗೂ ಫಲಾನುಭವಿಗಳು ಪಾಲ್ಗೊಂಡಿದ್ದರು.

ಫೋಟೋ... ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಯಿಮ್ಸ್ ಆಸ್ಪತ್ರೆ, ಯಾದಗಿರಿಯಲ್ಲಿ ವಾರ್ಷಿಕ ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.