ಕೊಣನೂರು ಗ್ರಾಮದ ವ್ಯಾಪ್ತಿಯಲ್ಲಿ ಒಟ್ಟು 70 ಲಕ್ಷ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ, ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಹಂತಹಂತವಾಗಿ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಅರಕಲಗೂಡು: ಕೊಣನೂರು ಗ್ರಾಮದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ. ಮಂಜು ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಕೊಣನೂರು ಗ್ರಾಮದ ವ್ಯಾಪ್ತಿಯಲ್ಲಿ ಒಟ್ಟು 70 ಲಕ್ಷ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ, ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಹಂತಹಂತವಾಗಿ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮುಖಂಡರು, ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಉಪಸ್ಥಿತರಿದ್ದರು.