ಸಾರಾಂಶ
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಕಬ್ಬಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ರೈತರ ಸಾಮಾನ್ಯ ಸಭೆ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವಕ್ಕೆ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ಅಂತಿಮ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಕಬ್ಬಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ರೈತರ ಸಾಮಾನ್ಯ ಸಭೆ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವಕ್ಕೆ ಚಾಲನೆ ನೀಡಲಾಯಿತು.
ಗ್ರಾಪಂ ಮಾಜಿ ಅಧ್ಯಕ್ಷ ಸಿರಿಯಪ್ಪ ಮತ್ತು ಕೃಷಿ ಮಹಾವಿದ್ಯಾಲಯ ಚಾಮರಾಜನಗರದ ವಿಶೇಷ ಅಧಿಕಾರಿ ಡಾ.ಸಿ.ದೊರೆಸ್ವಾಮಿ ನೇಗಿಲಿಗೆ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಸಂಯೋಜಕ ಡಾ.ಜಿ. ನಾಗೇಶ್, ಕೃಷಿ ವಿದ್ಯಾರ್ಥಿಗಳು ಮೂರು ತಿಂಗಳ ಕಾಲ ರೈತರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಅವರಿಗೆ ಕಬ್ಬಹಳ್ಳಿ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಕೃಷಿ ಮಹಾವಿದ್ಯಾಲಯ ಚಾಮರಾಜನಗರದ ವಿಶೇಷ ಅಧಿಕಾರಿ ಡಾ.ಸಿ. ದೊರೆಸ್ವಾಮಿ ಮಾತನಾಡಿ, ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನವನ್ನು ರೈತರಿಗೆ ಪರಿಚಯ ಮಾಡುತ್ತಾರೆ. ರೈತರಿಂದ ಕೃಷಿ ಬಗ್ಗೆ ಕಲಿಯುತ್ತಾರೆ. ಅವರಿಗೆ ಸಹಕಾರ ನೀಡಬೇಕು ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಸಿರಿಯಪ್ಪ ಮಾತನಾಡಿ, ಕೃಷಿ ವಿದ್ಯಾರ್ಥಿಗಳಿಗೆ ಸಹಕಾರ ನೀಡುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಶಿಬಿರದ ಸಹ ಸಂಯೋಜಕ ಡಾ.ಎನ್. ಉಮಾಶಂಕರ್, ಗ್ರಾಪಂ ಮಾಜಿ ಸದಸ್ಯರಾದ ವೃಷಭೇಂದ್ರಪ್ಪ, ಹಾಲು ಉತ್ಪಾದಕರ ಸಂಘ ಸದಸ್ಯರಾದ ಸುರೇಶ ಮತ್ತು ಗ್ರಾಪಂ ಮಾಜಿ ಸದಸ್ಯರಾದ ಮಹೇಶ ಉಪಸ್ಥಿತರಿದ್ದರು.