ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ

| Published : Sep 20 2025, 01:00 AM IST

ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ದಾಬಸ್‍ಪೇಟೆ: ತಾಯಂದಿರು ಮತ್ತು ಮಕ್ಕಳು, ಈ ದೇಶದ ಭವಿಷ್ಯ. ಅವರ ಆರೋಗ್ಯ ಮತ್ತು ಶಿಕ್ಷಣ ಉತ್ತಮವಾಗಿದ್ದರೆ, ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ವೈದ್ಯಾಧಿಕಾರಿ ಡಾ.ರಮೇಶ್ ತಿಳಿಸಿದರು.

ದಾಬಸ್‍ಪೇಟೆ: ತಾಯಂದಿರು ಮತ್ತು ಮಕ್ಕಳು, ಈ ದೇಶದ ಭವಿಷ್ಯ. ಅವರ ಆರೋಗ್ಯ ಮತ್ತು ಶಿಕ್ಷಣ ಉತ್ತಮವಾಗಿದ್ದರೆ, ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ವೈದ್ಯಾಧಿಕಾರಿ ಡಾ.ರಮೇಶ್ ತಿಳಿಸಿದರು. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಯಂದಿರು ಆರೋಗ್ಯವಂತರಾಗಿರಬೇಕು ಎಂಬುದು ಈ ಅಭಿಯಾನದ ಉದ್ದೇಶ. ತಾಯಂದಿರು ಆರೋಗ್ಯವಾಗಿದ್ದರೆ, ಇಡೀ ಕುಟುಂಬ ಆರೋಗ್ಯವಾಗಿರುತ್ತದೆ. ಈ ಸಮಾಜ, ದೇಶ ಕೂಡ ಆರೋಗ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸದೃಢ ಭಾರತದ ನಿರ್ಮಾಣಕ್ಕಾಗಿ ತಾಯಂದಿರ ಆರೋಗ್ಯಕ್ಕೆ ಬಹಳ ಪ್ರಾಮುಖ್ಯತೆ ನೀಡುತ್ತಿದ್ದೇವೆ ಎಂದರು. ಆರೋಗ್ಯ ನಿರೀಕ್ಷಣಾಧಿಕಾರಿ ಅಶ್ವಿನಿ ಮಾತನಾಡಿ ಸೆ.17ರಿಂದ ಅ.2ರವರೆಗೆ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ನಡೆಯಲಿದ್ದು, ನಮ್ಮ ಆಸ್ಪತ್ರೆಯ ಸಿಬ್ಬಂದಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಆರೋಗ್ಯದ ಬಗ್ಗೆ ತಾಯಂದಿರಿಗೆ ಜಾಗೃತಿ ಮೂಡಿಸಲು ಮುಂದಾಗುತ್ತೇವೆ ಎಂದರು. ಸಿಬ್ಬಂದಿ ಚಿಕ್ಕತಿಮ್ಮಯ್ಯ, ಜಯಲಕ್ಷ್ಮಮ್ಮ, ಜಯಲಕ್ಷ್ಮೀ ಇತರರಿದ್ದರು.

ಪೋಟೋ 8 :

ದಾಬಸ್‍ಪೇಟೆ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ವೈದ್ಯಾಧಿಕಾರಿ ಡಾ.ರಮೇಶ್ ಚಾಲನೆ ನೀಡಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಅಶ್ವಿನಿ, ಸಿಬ್ಬಂದಿ ಚಿಕ್ಕತಿಮ್ಮಯ್ಯ, ಜಯಲಕ್ಷ್ಮಮ್ಮ, ಜಯಲಕ್ಷ್ಮೀ ಇತರರಿದ್ದರು.