21 ಸಾವಿರ ದಾಖಲೆಗಳ ವಿತರಣೆಗೆ ಬೃಹತ್ ಯೋಜನೆ: ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡಕನ್ನಡಪ್ರಭ ವಾರ್ತೆ ಗೌರಿಬಿದನೂರುಸಾರ್ವಜನಿಕರ ಅಗತ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿದೆ. ಮನೆ ನಿರ್ಮಾಣಕ್ಕಾಗಿ ಸಾಲ ಪಡೆಯಲು ಹಕ್ಕು ಪತ್ರ ಮತ್ತು ಇ-ಸ್ವತ್ತು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಇ-ಸ್ವತ್ತು ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಹೇಳಿದರು.
ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ತಾಲೂಕಿನ ತೊಂಡೇಬಾವಿ ಹೋಬಳಿ ಇಂದಿರಾನಗರದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕು ಪತ್ರಗಳು ಮತ್ತು ಇ-ಸ್ವತ್ತು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಹಕ್ಕುಪತ್ರ ದೊರೆಯುವುದರಿಂದ ಫಲಾನುಭವಿಗಳಿಗೆ ಸಂಪೂರ್ಣ ಹಕ್ಕು ಸಿಗಲಿದ್ದು, ಮನೆ ನಿರ್ಮಾಣ, ಬ್ಯಾಂಕ್ ಸಾಲ, ನಾನಾ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ. ಸರ್ಕಾರ ಗ್ರಾಮೀಣ ಜನರ ಬದುಕನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಪರಿಣಾಮ ಕಾರಿಯಾಗಿ ಜಾರಿಗೊಳಿಸುತ್ತಿದೆ ಎಂದರು.ತಾಪಂ ಸಿಇಒ ಜಿ.ಕೆ.ಹೊನ್ನಯ್ಯ ಮಾತನಾಡಿ, ಗ್ರಾ.ಪಂ ವ್ಯಾಪ್ತಿಯಲ್ಲಿ ಸರ್ಕಾರಿ ಅಥವಾ ಖಾಸಗಿ ಸರ್ವೆ ನಂಬರ್ಗಳಲ್ಲಿ ಮನೆ ಹೊಂದಿರುವವರಿಗೆ ಈವರೆಗೆ ಇ-ಸ್ವತ್ತು ಸಿಗುತ್ತಿರಲಿಲ್ಲ. ಅಂತಹ ಮನೆಗಳ ಮಾಲೀಕರಿಗೆ ಈಗ ಹಕ್ಕುಪತ್ರ ವಿತರಿಸ ಲಾಗುತ್ತಿದೆ ಎಂದರು.ತಹಸೀಲ್ದಾರ್ ಅರವಿಂದ್.ಕೆ.ಎಂ. ಮಾತಾನಾಡಿದರು. ಈ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರಾಮರೆಡ್ಡಿ, ಟರಾಮರೆಡ್ಡಿ, ಎಂ.ಡಿ. ನರಸಿಂಹಮೂರ್ತಿ, ಗೋಪಿನಾಥ್, ಗಂಗಾಧರಪ್ಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.ಹಕ್ಕು ಪತ್ರ, ಇ-ಸ್ವತ್ತು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ
ಹಕ್ಕುಪತ್ರ ದೊರೆಯುವುದರಿಂದ ಫಲಾನುಭವಿಗಳಿಗೆ ಸಂಪೂರ್ಣ ಹಕ್ಕು ಸಿಗಲಿದ್ದು, ಮನೆ ನಿರ್ಮಾಣ, ಬ್ಯಾಂಕ್ ಸಾಲ, ನಾನಾ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.