ಸಾರಾಂಶ
ಪಶು ವೈದ್ಯಕೀಯ ಇಲಾಖೆಯಿಂದ ಪಶುಗಳಿಗೆ ನೀಡಲಾಗುವ ಕಾಲುಬಾಯಿ ರೋಗ ನಿರೋಧಕ ಲಸಿಕೆ ಅಭಿಯಾನಕ್ಕೆ ಶಾಸಕ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಪಶು ವೈದ್ಯಕೀಯ ಇಲಾಖೆಯಿಂದ ಪಶುಗಳಿಗೆ ನೀಡಲಾಗುವ ಕಾಲುಬಾಯಿ ರೋಗ ನಿರೋಧಕ ಲಸಿಕೆ ಅಭಿಯಾನಕ್ಕೆ ಶಾಸಕ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಸೋಮವಾರಪೇಟೆ ತಾಲೂಕಿನಾದ್ಯಂತ ೧೯ ಸಾವಿರ ಪಶುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಜಾನುವಾರುಗಳ ಮಾಲೀಕರು ತಪ್ಪದೇ ತಮ್ಮ ಪಶುಗಳಿಗೆ ಲಸಿಕೆ ಹಾಕಿಸಬೇಕು. ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲಾಗುತ್ತಿದ್ದು, ಜಾನುವಾರುಗಳ ಮಾಲೀಕರು ಉದಾಸೀನತೆ ತೋರಬಾರದು ಎಂದರು.ಅ.೨೧ರಿಂದ ಸೆ.೨೨ರ ವರೆಗೆ ಅಭಿಯಾನ ನಡೆಯಲಿದ್ದು, ೧೯ ಮಂದಿಯ ತಂಡವನ್ನು ರಚಿಸಲಾಗಿದೆ. ಪ್ರತಿದಿನ ಕನಿಷ್ಟ ೧೦೦ ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು. ಸಿಬ್ಬಂದಿ ಪ್ರಾಮಾಣಿಕವಾಗಿ ಲಸಿಕೆ ನೀಡಬೇಕು ಸೂಚಿಸಿದರು.ಲಸಿಕೆ ನಂತರ ಒಂದು ವೇಳೆ ಅಡ್ಡ ಪರಿಣಾಮ ಕಂಡು ಬಂದರೆ ತಕ್ಷಣ ಚಿಕಿತ್ಸೆ ನೀಡಲು ವೈದ್ಯರು ಸಿದ್ಧರಿದ್ದಾರೆ. ಪಶುಗಳು ಎಲ್ಲೇ ಇದ್ದರೂ ಅಲ್ಲಿಗೆ ತೆರಳಿ ಲಸಿಕೆ ನೀಡಲಾಗುವುದು. ಸರ್ಕಾರ ಉಚಿತವಾಗಿ ಯೋಜನೆ ಜಾರಿಗೆ ತಂದಿದ್ದು, ಪಶುಗಳ ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಬೇಕೆಂದು ತಿಳಿಸಿದರು.ಈ ಸಂದರ್ಭ ಪಶು ವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಾಜಶೇಖರ್, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಬಿ.ಬಿ. ಸತೀಶ್ ಸೇರಿದಂತೆ ಪಶು ವೈದ್ಯಕೀಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.