ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ ನಗರದ ವಿಎಸ್‌ಟಿ ರಸ್ತೆಯಲ್ಲಿರುವ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಶೋರೂಂನಲ್ಲಿ ಜನವರಿ 12ರ ವರೆಗೆ ಹಮ್ಮಿಕೊಳ್ಳಲಾದ ‘ವಿಶ್ವ ವಜ್ರ’ ಡೈಮಂಡ್ ಪ್ರದರ್ಶನಕ್ಕೆ ಬುಧವಾರ ಚಾಲನೆ ನೀಡಲಾಯಿತು. ಪ್ರದರ್ಶನವನ್ನು ಉದ್ಘಾಟಿಸಿದ ಬಿಜೆಪಿ ನಾಯಕಿ ವೀಣಾ ಎಸ್. ಶೆಟ್ಟಿ ಮಾತನಾಡಿ, ಇವತ್ತು ಡೈಮಂಡ್‌ಗಳು ಕೇವಲ ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಇಷ್ಟವಾಗುತ್ತಿದೆ. ಅಂತಹ ಎಲ್ಲ ರೀತಿಯ ವಜ್ರಗಳ ಸಂಗ್ರಹವು ಸುಲ್ತಾನ್‌ನಲ್ಲಿ ಇದೆ. ಅಭಿವೃದ್ಧಿ ಹೊಂದಿರುವ ಉಡುಪಿಯಲ್ಲಿ ಸುಲ್ತಾನ್ ಗೋಲ್ಡ್ ಗ್ರಾಹಕರಿಗೆ ಉತ್ತಮ ಬೆಲೆಯಲ್ಲಿ ಆಭರಣಗಳನ್ನು ಒದಗಿಸುತ್ತಿದೆ. ಇಲ್ಲಿನ ಗ್ರಾಹಕ ಸ್ನೇಹಿ ಸಿಬ್ಬಂದಿಗಳಿಂದಾಗಿ ಸಂಸ್ಥೆಯು ಜನರಿಗೆ ಸಾಕಷ್ಟು ಹತ್ತಿರವಾಗಿದೆ. ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ವೀಣಾ ಶೆಟ್ಟಿ ಅವರು ಬೆಲ್ಜಿಯಂ ಕಲೆಕ್ಷನ್, ಯಾಸ್ಮೀನ್ ಕೆ. ಅಂಬಾಗಿಲು ಅವರು ಫ್ರೆಂಚ್ ಕಲೆಕ್ಷನ್, ತೋಟ ಇರಾಮ್ ನಾಝ್ ಅವರು ಯು.ಎಸ್. ಕಲೆಕ್ಷನ್, ಸಂಧ್ಯಾ ಹರ್ಷಿತ್ ಶೆಟ್ಟಿ ಅವರು ಟರ್ಕಿಸ್ ಕಲೆಕ್ಷನ್, ಯಾಸ್ಮಿನ್ ಫೈರೋಝ್ ಅವರು ಟ್ರೆಡಿಷನ್ ಕಲೆಕ್ಷನ್ ಹಾಗೂ ಡಾ.ಅನ್ನಪೂರ್ಣ ರಾವ್ ಅವರು ಮಿಡ್ಲ್ ಈಸ್ಟ್ ಕಲೆಕ್ಷನ್‌ನ್ನು ಅನಾವರಣಗೊಳಿಸಿದರು. ಸುಲ್ತಾನ್ ಗೋಲ್ಡ್ ಪ್ರಾದೇಶಿಕ ವ್ಯವಸ್ಥಾಪಕ ಸುಮೇಶ್, ಉಡುಪಿ ಬ್ರಾಂಚ್ ಮ್ಯಾನೇಜರ್ ಮನೋಜ್ ಎಂ.ಎಸ್., ಸೇಲ್ಸ್ ಮ್ಯಾನೇಜರ್ ಅಬ್ದುಲ್ ವಾಹಿದ್ ಪಿ.ಎಂ., ಸುಲ್ತಾನ್ ಗ್ರೂಪ್ ಉಡುಪಿ ಫ್ಲೋರ್ ಮ್ಯಾನೇಜರ್ ಸಿದ್ದಿಕ್ ಹಸನ್, ಮಾರ್ಕೆಟಿಂಗ್ ಮ್ಯಾನೇಜರ್ ರಿಫಾ ಆಗಾ, ಸಿಬ್ಬಂದಿ ವರ್ಗ ಹಾಗೂ ಗ್ರಾಹಕರು ಉಪಸ್ಥಿತರಿದ್ದರು. ವಿಜೇತ ಶೆಟ್ಟಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
ವಿಶ್ವದ ವಿವಿಧ ದೇಶಗಳ ವಿವಿಧ ಹೊಸ ಮಾದರಿಯ ಡೈಮಂಡ್‌ಗಳ ಸಂಗ್ರಹ ಈ ಪ್ರದರ್ಶನದಲ್ಲಿದೆ. ಪ್ರದರ್ಶನದಲ್ಲಿ ಐಷರಾಮಿ ವಜ್ರಾಭರಣಗಳ ಸಂಗ್ರಹ, ಸಾಲಿಟೈರ್ ಕಲೆಕ್ಷನ್, ಸಾಂಪ್ರದಾಯಿಕ ಶೈಲಿಯ ವಜ್ರಾಭರಣಗಳು, ತನ್ಮನಿಯಾ ಕಲೆಕ್ಷನ್, ಬ್ರೈಡಲ್ ವಜ್ರಾಭರಣ ಕಲೆಕ್ಷನ್, ಅನ್ಕಟ್ ಡೈಮಂಡ್, ರುಬಿ ಎಮೆರಾಲ್ಡ್ ಜೆಮ್ ಸ್ಟೋನ್ ಕಲೆಕ್ಷನ್ಗಳ ಸಂಗ್ರಹ ಇವೆ. ಪ್ರತಿ ಡೈಮಂಡ್ ಕ್ಯಾರೆಟ್ ಮೇಲೆ 8000 ರು. ರಿಯಾಯಿತಿ ನೀಡಲಾಗುವುದು ಎಂದು ಉಡುಪಿ ಬ್ರಾಂಚ್ ಮ್ಯಾನೇಜರ್ ತಿಳಿಸಿದ್ದಾರೆ.