ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ

| Published : Mar 16 2024, 01:45 AM IST

ಸಾರಾಂಶ

ಮೂಡಲಗಿ ಪಟ್ಟಣದ ತಾಪಂ ಕಾರ್ಯಲಯದಲ್ಲಿ ಅರಭಾವಿ ಮತಕ್ಷೇತ್ರದ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗೆ ಚಾಲನೆ ನೀಡಲಾಯಿತು.

ಮೂಡಲಗಿ: ಪಟ್ಟಣದ ತಾಪಂ ಕಾರ್ಯಲಯದಲ್ಲಿ ಅರಭಾವಿ ಮತಕ್ಷೇತ್ರದ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗೆ ಚಾಲನೆ ನೀಡಲಾಯಿತು. ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ನವೀನಪ್ರಸಾದ ಕಟ್ಟಿಮನಿ ಮತದಾನ ಜಾಗೃತಿಗೆ ಚಾಲನೆ ನೀಡಿ ಮಾತನಾಡಿ, ಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತ ಹಾಕುವ ಮೂಲಕ ಹಕ್ಕು ಚಲಾಯಿಸಬೇಕು. ಸಂವಿಧಾನ ತಮಗೆ ನೀಡಿರುವ ಹಕ್ಕನ್ನುಚಲಾಯಿಸಬೇಕು. ಅಕ್ಕಪಕ್ಕದಲ್ಲಿರುವ ಅರ್ಹ ಮತದಾರಿಗೆ ಮತದಾನ ಮಾಡಲು ಜಾಗೃತಿ ಮೂಡಿಸಬೇಕೆಂದರು. ಈ ಸಮಯದಲ್ಲಿ ತಾಪಂ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನವರ, ಚಂದ್ರಶೇಖರ ಬಾರ್ಕಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಂಜನಾ ಗಚ್ಚಿ ಹಾಗೂ ಕಚೇರಿಯ ಸಿಬ್ಬಂದಿ ಇದ್ದರು.