ಸಾಮಾಜಿಕ ಸೇವೆ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ರುದ್ರಾಕ್ಷ ಫೌಂಡೇಶನ್ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮರ್ಪಣ ಸಂಸ್ಥೆಯು ತನ್ನ ಸಂಘಟನಾ ಬಲವನ್ನು ವಿಸ್ತರಿಸುವ ನಿಟ್ಟಿನಲ್ಲಿ ಎಕ್ಸಿಕ್ಯೂಟಿವ್ ಕಮಿಟಿ ಮತ್ತು ಸೇವಾ ಸಮಿತಿ ರಚನೆಗಾಗಿ ಪೂರ್ವಭಾವಿ ಸಭೆಯನ್ನು ಆಯೋಜಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ರುದ್ರಾಕ್ಷ ಫೌಂಡೇಶನ್ ಹಾಗೂ ಸಮರ್ಪಣ ಸಂಸ್ಥೆಯ ಅಧ್ಯಕ್ಷ ಜೈಪ್ರಕಾಶ್ ಗುರೂಜಿ, ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ವೇಳೆ ಅನ್ನದಾಸೋಹಕ್ಕೆ ಸಹಕಾರ ನೀಡುವುದು ಮತ್ತು ದೇವಸ್ಥಾನಗಳಲ್ಲಿ ನಡೆಯುವ ಸರಳ ವಿವಾಹ ಸಮಾರಂಭಗಳಿಗೆ ಊಟದ ವ್ಯವಸ್ಥೆ ಕಲ್ಪಿಸುವುದೇ ಸಂಸ್ಥೆಯ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.

ಅರಸೀಕೆರೆ: ಸಾಮಾಜಿಕ ಸೇವೆ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ರುದ್ರಾಕ್ಷ ಫೌಂಡೇಶನ್ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮರ್ಪಣ ಸಂಸ್ಥೆಯು ತನ್ನ ಸಂಘಟನಾ ಬಲವನ್ನು ವಿಸ್ತರಿಸುವ ನಿಟ್ಟಿನಲ್ಲಿ ಎಕ್ಸಿಕ್ಯೂಟಿವ್ ಕಮಿಟಿ ಮತ್ತು ಸೇವಾ ಸಮಿತಿ ರಚನೆಗಾಗಿ ಪೂರ್ವಭಾವಿ ಸಭೆಯನ್ನು ಆಯೋಜಿಸಿದೆ.ಈ ಸಂದರ್ಭದಲ್ಲಿ ಮಾತನಾಡಿದ ರುದ್ರಾಕ್ಷ ಫೌಂಡೇಶನ್ ಹಾಗೂ ಸಮರ್ಪಣ ಸಂಸ್ಥೆಯ ಅಧ್ಯಕ್ಷ ಜೈಪ್ರಕಾಶ್ ಗುರೂಜಿ, ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ವೇಳೆ ಅನ್ನದಾಸೋಹಕ್ಕೆ ಸಹಕಾರ ನೀಡುವುದು ಮತ್ತು ದೇವಸ್ಥಾನಗಳಲ್ಲಿ ನಡೆಯುವ ಸರಳ ವಿವಾಹ ಸಮಾರಂಭಗಳಿಗೆ ಊಟದ ವ್ಯವಸ್ಥೆ ಕಲ್ಪಿಸುವುದೇ ಸಂಸ್ಥೆಯ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.ಈ ಸಮಾಜಮುಖಿ ಚಿಂತನೆಯ ಭಾಗವಾಗಿ ಸಮರ್ಪಣ ಸಂಸ್ಥೆಯ ಮೂಲಕ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಅದರ ಮೊದಲ ಹಂತವಾಗಿ ಸಂಸ್ಥೆಯ ಎಕ್ಸಿಕ್ಯೂಟಿವ್ ಕಮಿಟಿ ಹಾಗೂ ಸೇವಾ ಸಮಿತಿಯನ್ನು ರಚಿಸುವ ಸಲುವಾಗಿ ಪೂರ್ವಭಾವಿ ಸಭೆಯನ್ನು ದಿನಾಂಕ 17ನೇ ತಾರೀಕು ಶನಿವಾರ ಸಂಜೆ 4 ಗಂಟೆಗೆ ನಗರದ ಲಕ್ಷ್ಮಿಪುರದಲ್ಲಿರುವ ರುದ್ರಾಕ್ಷ ಫೌಂಡೇಶನ್ ಆಶ್ರಮದ ಆವರಣದಲ್ಲಿ ಆಯೋಜಿಸಲಾಗಿದೆ.ಸಮಾನ ಮನಸ್ಕರು, ಸಮಾಜ ಸೇವೆಯ ಆಸಕ್ತಿ ಹಾಗೂ ಸೇವಾ ಮನೋಭಾವ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.