ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್ ಲಾವಣ್ಯ ಬೋರ್ಕರ್ ರವರಿಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್ ಲಾವಣ್ಯ ಬೋರ್ಕರ್ ರವರಿಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ಟ್ರಸ್ಟ್ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವದ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಲಾವಣ್ಯ ಬೋರ್ಕರ್ ರವರ ಕಲಾ ಹಾಗೂ ಭರತನಾಟ್ಯದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇತ್ತೀಚೆಗೆ ಹಾಸನದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಲಾವಣ್ಯ ಬೋರ್ಕರ್ ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಎ ಕೋರ್ಸ್ ನಲ್ಲಿ ವ್ಯಾಸಂಗವನ್ನು ಮಾಡುತ್ತಿದ್ದಾರೆ. ಅವರು ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ಗುರುಗಳಾದ ಪ್ರೇಮಾಂಜಲಿ ಆಚಾರ್ಯ ರವರ ಶಿಷ್ಯೆ ಹಾಗೂ ವಿರಾಜಪೇಟೆ ಬೇಟೋಳಿ ಗ್ರಾಮದ ನಾಟಿ ವೈದ್ಯರು ಹಾಗೂ ಕೊಡಗು ಬಾಲವಲಿಕರ್ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷ ಬಿ. ಜಿ. ನಟರಾಜ್ ಬೋರ್ಕರ್ ಹಾಗೂ ಸುನಂದ ಬೋರ್ಕರ್ ರವರ ಪುತ್ರಿಯಾಗಿದ್ದಾಳೆ.