ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ -ಮಾಜಿ ಸಚಿವ ಬಿಸಿಪಾ

| Published : Apr 23 2024, 12:49 AM IST / Updated: Apr 23 2024, 12:50 AM IST

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ -ಮಾಜಿ ಸಚಿವ ಬಿಸಿಪಾ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ. ಅದರಿಂದ ಬಿಜೆಪಿಗೆ ಮತವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಹಿರೇಕೆರೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ. ಕೆಲವು ಕೋಮಿನವರ ಪರ ಕಾಳಜಿವಹಿಸುತ್ತಿರುವುದರಿಂದ ಅಪರಾಧ ಕೃತ್ಯಗಳ ಸಂಖ್ಯೆ ಹೆಚ್ಚಾಗುತ್ತಿವೆ. ಅದರಿಂದ ಬಿಜೆಪಿಗೆ ಮತವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.ಹಿರೇಕೆರೂರ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಮತ ಪ್ರಚಾರ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಅಡಳಿತದ ಕಾರ್ಯವೈಖರಿಯನ್ನು ಪ್ರತಿ ಮತದಾರನಿಗೂ ಮನವರಿಕೆ ಮಾಡುವ ಮೂಲಕ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಲು ಕೆಲಸ ಮಾಡಬೇಕು. ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರೆ ದೊಡ್ಡ ಶಕ್ತಿ. ದೇಶದ ಸುಭದ್ರತೆಗಾಗಿ ಭಾರತಕ್ಕೆ ಮೋದಿ ಅವಶ್ಯ. ಆದ್ದರಿಂದ ನರೇಂದ್ರ ಮೋದಿ ಅವರನ್ನು ಮತ್ತೆ ಈ ದೇಶದ ಪ್ರಧಾನಿಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದರಿಂದ ಕಾರ‍್ಯಕರ್ತರು ಪಕ್ಷಕ್ಕೆ ಬಲ ನೀಡಬೇಕು ಎಂದರು.ಕೆಸಿಸಿ ಬ್ಯಾಂಕ್ ನಿರ್ದೇಶಕರಾದ ಲಿಂಗರಾಜ ಚಪ್ಪರದಳ್ಳಿ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೃಷ್ಟಿ ಪಾಟೀಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆರ್.ಎನ್. ಗಂಗೋಳ, ಹಿರೇಕೆರೂರು ಮಂಡಲದ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಟಿಎಪಿಎಂಎಸ್ ಅಧ್ಯಕ್ಷ ಎಸ್.ಎಸ್. ಪಾಟೀಲ, ರವಿಶಂಕರ ಬಾಳಿಕಾಯಿ, ಎನ್.ಎಂ. ಈಟೇರ, ಬಸವರಾಜ ಕಾಲ್ಹೀಹಳ್ಳಿ, ಮಾಲತೇಶ ಮಾದರ, ಗ್ರಾಮದ ಮುಖಂಡರು, ಕಾರ್ಯಕರ್ತರು ಇದ್ದರು.