ಸಾರಾಂಶ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಶಾಸಕ ಅಂತ ಬಿಟ್ಟು ಬಿಡಲು ಆಗುತ್ತಾ? ಶಾಸಕ ಆದ ಮಾತ್ರಕ್ಕೆ ಪೊಲೀಸರ ವಿರುದ್ಧ ಗಲಾಟೆ ಮಾಡಬಹುದಾ? ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
2 ಎಫ್‌ಐಆರ್ ದಾಖಲಾಗಿದೆ. ಕಾನೂನು ಎಲ್ರಿಗೂ ಒಂದೇ ಕನ್ನಡಪ್ರಭ ವಾರ್ತೆ ಮಂಗಳೂರು
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಶಾಸಕ ಅಂತ ಬಿಟ್ಟು ಬಿಡಲು ಆಗುತ್ತಾ? ಶಾಸಕ ಆದ ಮಾತ್ರಕ್ಕೆ ಪೊಲೀಸರ ವಿರುದ್ಧ ಗಲಾಟೆ ಮಾಡಬಹುದಾ? ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಶಾಸಕ ಪೂಂಜ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಮಂಗಳೂರು ಏರ್ಪೋರ್ಟಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.
ಜಾಮೀನು ರಹಿತ ಅಪರಾಧ: ಹರೀಶ್ ಪೂಂಜ ವಿರುದ್ಧ ಐಪಿಸಿ ಸೆಕ್ಷನ್ 353 ಅಡಿ ಪ್ರಕರಣ ದಾಖಲಾಗಿದೆ. ಇದು ಜಾಮೀನು ರಹಿತ ಅಪರಾಧ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಹರೀಶ್ ಪೂಂಜ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲಗಳೆಯಬಹುದಾ? ಶಾಸಕ ಅಂತ ಬಿಟ್ಟು ಬಿಡೋಕೆ ಆಗುತ್ತಾ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.ಹರೀಶ್ ಪೂಂಜ ಮೇಲೆ ಎರಡು ಎಫ್ಐಆರ್ ದಾಖಲಾಗಿವೆ. ಅವರು ಗಲಾಟೆ ಮಾಡಿದ್ದು ಯಾರ ಪರವಾಗಿ ಗೊತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.