ಅರಸೀಕೆರೆ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷ ಶಿವಕುಮಾರ್ ಹಾಗೂ ಪದಾಧಿಕಾರಿಗಳು ಕೋಡಿಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಅವರು ವಕೀಲರ ಸಂಘವು ಸಮಾಜದಲ್ಲಿ ಮಹತ್ವದ ಸ್ಥಾನ ಹೊಂದಿದ್ದು, ಕಾನೂನು ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಜತೆಗೆ ಜನಪರ ಹಾಗೂ ಸಮಾಜಮುಖಿ ಕಾರ್ಯಗಳಿಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಕಕ್ಷಿದಾರರು ನ್ಯಾಯದ ನಿರೀಕ್ಷೆಯಿಂದ ವಕೀಲರನ್ನು ಸಂಪರ್ಕಿಸುತ್ತಾರೆ. ಹೀಗಾಗಿ ಅವರಿಗೆ ಕಾನೂನು ನೆರವು ನೀಡುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಸಂಘದ ವತಿಯಿಂದ ಹಮ್ಮಿಕೊಳ್ಳಬೇಕು ಎಂದು ಶ್ರೀಗಳು ತಿಳಿಸಿದರು.

ಅರಸೀಕೆರೆ: ವಕೀಲರು ಕೇವಲ ಕಾನೂನು ಸೇವೆಗೆ ಸೀಮಿತರಾಗದೆ, ಸಾಮಾಜಿಕ ಹೊಣೆಗಾರಿಕೆಯನ್ನೂ ನಿಭಾಯಿಸಬೇಕು ಎಂದು ಹಾರನಹಳ್ಳಿ ಕೋಡಿಮಠದ ಜಗದ್ಗುರು ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಕರೆ ನೀಡಿದರು.ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷ ಶಿವಕುಮಾರ್ ಹಾಗೂ ಪದಾಧಿಕಾರಿಗಳು ಕೋಡಿಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಅವರು ವಕೀಲರ ಸಂಘವು ಸಮಾಜದಲ್ಲಿ ಮಹತ್ವದ ಸ್ಥಾನ ಹೊಂದಿದ್ದು, ಕಾನೂನು ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಜತೆಗೆ ಜನಪರ ಹಾಗೂ ಸಮಾಜಮುಖಿ ಕಾರ್ಯಗಳಿಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಕಕ್ಷಿದಾರರು ನ್ಯಾಯದ ನಿರೀಕ್ಷೆಯಿಂದ ವಕೀಲರನ್ನು ಸಂಪರ್ಕಿಸುತ್ತಾರೆ. ಹೀಗಾಗಿ ಅವರಿಗೆ ಕಾನೂನು ನೆರವು ನೀಡುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಸಂಘದ ವತಿಯಿಂದ ಹಮ್ಮಿಕೊಳ್ಳಬೇಕು ಎಂದು ಶ್ರೀಗಳು ತಿಳಿಸಿದರು.

ನೂತನ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕೋಡಿಮಠದ ಶ್ರೀಗಳೊಂದಿಗೆ ವಕೀಲರ ಸಂಘಕ್ಕೆ ಹಿಂದಿನಿಂದಲೂ ಆತ್ಮೀಯ ಹಾಗೂ ಅವಿನಾಭಾವ ಸಂಬಂಧವಿದೆ. ಸಂಘದ ಬೆಳವಣಿಗೆಗೆ ಶ್ರೀಗಳು ನಿರಂತರವಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ನೀಡುತ್ತಿದ್ದು, ಇದಕ್ಕಾಗಿ ಸಂಘದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಶ್ರೀಗಳ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ವಕೀಲರ ಸಂಘದ ಸಂಘಟನಾ ಚಟುವಟಿಕೆಗಳ ಜತೆಗೆ ಸಾರ್ವಜನಿಕರಿಗೆ ಅನುಕೂಲವಾಗುವ ಸಮಾಜಮುಖಿ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸಿದ್ದಮಲ್ಲಪ್ಪ, ಕಾರ್ಯದರ್ಶಿ ಪುರುಷೋತ್ತಮ್, ಹಿರಿಯ ವಕೀಲ ವಿಜಯ್ ಕುಮಾರ್, ನಿರ್ದೇಶಕ ವಿರುಪಾಕ್ಷ ಸೇರಿದಂತೆ ಹಲವು ವಕೀಲರು ಉಪಸ್ಥಿತರಿದ್ದರು.