ಸಾರಾಂಶ
ಬಾಂಗ್ಲಾದಲ್ಲಿ ಮುಸ್ಲಿಮರ ಜನಾಂಗ ಅಲ್ಲಿನ ಹಿಂದುಗಳ ಮೇಲೆ ದೌರ್ಜನ್ಯ ಮತ್ತು ಧಾರ್ಮಿಕ ಕೇಂದ್ರಗಳ ಮೇಲೆ ನಡೆಸುತ್ತಿರುವ ದಾಳಿಯನ್ನು ತೀವ್ರವಾಗಿ ವಿರೋಧಿಸಿದರು. ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರ್ಕಾರಗಳು ಅತ್ಯಾಚಾರಿಗಳಿಗೆ ಮತ್ತು ಕೊಲೆಗಡುಕರಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಬೇಕು.
ಕನ್ನಡಪ್ರಭ ವಾರ್ತೆ ಮದ್ದೂರು
ಕೊಲ್ಕತ್ತಾದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ತರಬೇತಿ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ, ಬಾಂಗ್ಲಾ ಹಿಂದುಗಳ ಮಾರಣಹೋಮ ಖಂಡಿಸಿ ಪಟ್ಟಣದ ವಕೀಲರು ಶನಿವಾರ ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಭವನದಲ್ಲಿ ಸಂಘದ ಉಪಾಧ್ಯಕ್ಷ ಎಂ.ಎಂ. ಪುಟ್ಟರಾಜು ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ವಕೀಲರು ಕೊಲ್ಕತ್ತಾದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಆಕ್ರೋಶ ವ್ಯಕ್ತಪಡಿಸಿದರು.
ಬಾಂಗ್ಲಾದಲ್ಲಿ ಮುಸ್ಲಿಮರ ಜನಾಂಗ ಅಲ್ಲಿನ ಹಿಂದುಗಳ ಮೇಲೆ ದೌರ್ಜನ್ಯ ಮತ್ತು ಧಾರ್ಮಿಕ ಕೇಂದ್ರಗಳ ಮೇಲೆ ನಡೆಸುತ್ತಿರುವ ದಾಳಿಯನ್ನು ತೀವ್ರವಾಗಿ ವಿರೋಧಿಸಿದರು. ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರ್ಕಾರಗಳು ಅತ್ಯಾಚಾರಿಗಳಿಗೆ ಮತ್ತು ಕೊಲೆಗಡುಕರಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.ನೋಂದ ಮಹಿಳಾ ಉದ್ಯೋಗಿಗಳಿಗೆ ಭದ್ರತೆ ಒದಗಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ರೂಪಿಸಬೇಕು. ಎಲ್ಲಾ ಪ್ರಕರಣಗಳ ಬಗ್ಗೆ ಯಾವುದೇ ನ್ಯಾಯಾಲಯಗಳ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸದಂತೆ ವಕೀಲರಗಳು ಸಾಮೂಹಿಕವಾಗಿ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಹಿರಿಯ ವಕೀಲರಾದ ಎಚ್.ಮಾದೇಗೌಡ, ಬಿ.ಅಪ್ಪಾಜಿಗೌಡ, ಎಂ.ಶಿವಣ್ಣ, ವಿ.ಟಿ.ರವಿಕುಮಾರ್, ಎಂ.ಎಂ.ಪ್ರಶಾಂತ್, ಎಸ್.ಉಮೇಶ್, ಪ್ರಿಯಾಂಕ, ಪ್ರಸನ್ನ, ಯೋಗಾನಂದ, ಮಹೇಶ್, ಕಾರ್ತಿಕ್, ಯಶ್ವಂತ್ ಮತ್ತಿತರರು ಪಾಲ್ಗೊಂಡಿದ್ದರು.