ಸಾರಾಂಶ
ಕನ್ನಡಪ್ರಭ ವಾರ್ತೆ ಗುಡಿಬಂಡೆ
ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ವಕೀಲರ ಪರಿಷತ್ ಉಪಾಧ್ಯಕ್ಷ ವೈ.ಆರ್.ಸದಾಶಿವರೆಡ್ಡಿ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ಗುಡಿಬಂಡೆಯ ವಕೀಲರು ನ್ಯಾಯಾಲಯದ ಕಲಾಪಕ್ಕೆ ಹಾಜರಾಗದೆ ಮೌನ ಪ್ರತಿಭಟನೆ ನಡೆಸಿ, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ. ಸಿ. ಅಶ್ವತ್ ರೆಡ್ಡಿ ಮಾತನಾಡಿ, ಸದಾಶಿವರೆಡ್ಡಿಯವರ ಮೇಲೆ ಅಪರಿಚಿತರಿಂದ ನಡೆದ ಭೀಕರ ಹಲ್ಲೆ ಮತ್ತು ದಾಳಿಯನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ ಎಂದರು.
ವಕೀಲರಿಗೆ ರಕ್ಷಣೆ ನೀಡಬೇಕುಕಾನೂನು ರಕ್ಷಣೆ ಹೊಣೆ ಹೊತ್ತ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು, ವಕೀಲರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳು ಮರುಕಳಿಸಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಕೆಂಪುಪಟ್ಟಿ ಧರಿಸಿ ಪ್ರತಿಭಟನೆಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಮುಂಭಾಗ ತಾಲೂಕು ವಕೀಲರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಕೀಲರು ಸಾಂಕೇತಿಕವಾಗಿ ಕೆಂಪು ಪಟ್ಟಿ ಧರಿಸಿ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಸಿ.ವಿ.ಮಂಜುನಾಥ, ವಕೀಲರಾದ ನಂದೀಶ್ವರ ರೆಡ್ಡಿ, ಎನ್.ನರಸಿಂಹಪ್ಪ, ಪವಿತ್ರ, ಶಿವಪ್ಪ, ತೇಜ, ಗಿರೀಶ್, ನರೇಂದ್ರ, ಬಾಬಾ ಜಾನ್, ಅಭಿಷೇಕ್ ಸೇರಿದಂತೆ ಹಲವರು ಭಾಗವಹಿಸಿದ್ದರು.