ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ ವಕೀಲರ ಪ್ರತಿಭಟನೆ

| Published : Dec 21 2024, 01:20 AM IST

ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ ವಕೀಲರ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಗೌರವಿಸುವ ಜೊತೆಗೆ ಜ್ಞಾನದ ಸಂಕೇತವೆಂದು ಪೂಜಿಸುತ್ತಿದೆ. ಆದರೆ ಕೀಳು ಮನಸ್ಥಿತಿಯುಳ್ಳ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಅವಮಾನಿಸಿರುವುದು ಖಂಡನೀಯ,

ನಂಜನಗೂಡು: ಡಾ.ಬಿ.ಆರ್‌. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ಖಂಡಿಸಿ ಪಟ್ಟಣದ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟಿಸಿದರು. ಸ್ವಯಂ ಪ್ರೇರಿತವಾಗಿ ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿದ ವಕೀಲರು ನ್ಯಾಯಾಲಯದ ಆವರಣದಿಂದ ಹುಲ್ಲಹಳ್ಳಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಕೀಲರ ಸಂಘದ ಅಧ್ಯಕ್ಷ ಹಾನಿಯಂಬಳ್ಳಿ ಮಹದೇವಸ್ವಾಮಿ ಮಾತನಾಡಿ, ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಗೌರವಿಸುವ ಜೊತೆಗೆ ಜ್ಞಾನದ ಸಂಕೇತವೆಂದು ಪೂಜಿಸುತ್ತಿದೆ. ಆದರೆ ಕೀಳು ಮನಸ್ಥಿತಿಯುಳ್ಳ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಅವಮಾನಿಸಿರುವುದು ಖಂಡನೀಯ, ಆದ್ದರಿಂದ ಈ ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ವಕೀಲರಾದ ಮುರುಳಿ, ಸೋಮಶೇಖರ್, ಸೋಮಯ್ಯ, ಸುನಿಲ್ ಕುಮಾರ್, ಮಲ್ಲಿಕಾರ್ಜುನ, ಶಿವಾನಂದ, ಚಿನ್ನಸ್ವಾಮಿ, ಶ್ರೀಕಂಠ, ಗಣೇಶ್, ವಕೀಲರ ಸಂಘದ ಪದಾಧಿಕಾರಿಗಳು ಇದ್ದರು.