ಸಾರಾಂಶ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಅವಹೇಳನಾಕಾರಿ ಹೇಳಿಕೆ ಖಂಡಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ತಹಸೀಲ್ದಾರ್ ಮುಖಾಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.
- ಕ್ರಮಕ್ಕೆ ಒತ್ತಾಯಿಸಿ ತಹಸೀಲ್ದಾರ್ ಮೂಲಕ ಮನವಿ - - - ಜಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಅವಹೇಳನಾಕಾರಿ ಹೇಳಿಕೆ ಖಂಡಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ತಹಸೀಲ್ದಾರ್ ಮುಖಾಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.
ವಕೀಲರ ಸಂಘದ ತಾಲೂಕು ಅಧ್ಯಕ್ಷ ವಕೀಲ ಟಿ.ಬಸವರಾಜ್ ಮಾತನಾಡಿ,''''''''ದೇಶದಲ್ಲಿ ಎಲ್ಲ ವರ್ಗಗಳಿಗೆ ಸಮಾನತೆ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರನ್ನು ಸ್ಮರಿಸುವುದರಲ್ಲಿ ತಪ್ಪೇನಿಲ್ಲ. ಬಹುಸಂಸ್ಕೃತಿ ನೆಲೆಸಿದ ದೇಶದಲ್ಲಿ ಹಲವು ಧರ್ಮಗಳು ಅವರವರ ನಂಬಿಕೆ ಮನುವಾದವನ್ನು ಬಲವಂತವಾಗಿ ಬಿತ್ತುವುದು ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟುಮಾಡಿದೆ. ಈ ಹಿನ್ನೆಲೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಸತ್ತಿನಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭ ವಕೀಲರ ಸಂಘದ ಪದಾಧಿಕಾರಿಗಳಾದ ಪರಶುರಾಮ್, ಆರ್.ಓಬಳೇಶ್, ಶ್ರೀನಿವಾಸ್ ಸಿ.ಬಸವರಾಜ್, ಪಂಪಣ್ಣ, ಎಚ್.ಬಸವರಾಜಪ್ಪ, ನಾಗೇಶ್, ತಿಪ್ಪೇಸ್ವಾಮಿ, ಕುಂಬಾರ್, ಕೆ.ವಿ. ರುದ್ರೇಶ್, ಹಾಲಪ್ಪ, ಬಾಲಪ್ಪ, ರಂಗಪ್ಪ, ವೀರೇಶ್, ಮಹಾಂತೇಶ್, ಗೋಗುದ್ದು ತಿಪ್ಪೇಸ್ವಾಮಿ ಅನೇಕರು ಇದ್ದರು.
- - - -23ಜೆ.ಎಲ್.ಆರ್.3:ಅಮಿತ್ ಶಾ ಹೇಳಿಕೆ ಖಂಡಿಸಿ ಜಗಳೂರು ತಾಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.