ಸಾರಾಂಶ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆಯಲ್ಲಿ ಆಗುತ್ತಿರುವ ತೊಂದರೆ ಹಾಗೂ ಹೊಸ ಪಡಿತರ ಚೀಟಿಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಗೊಂದಲವನ್ನು ಸರಿಪಡಿಸಲು ಆಗ್ರಹಿಸಿ ಸೋಮವಾರ ಸ್ಲಂ ಜನಾಂದೋಲನ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಹಾರ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸ್ಲಂ ಜನಾಂದೋಲನ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸ್ಲಂ ನಿವಾಸಿಗಳ ಮೆರವಣಿಗೆ
ಗದಗ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆಯಲ್ಲಿ ಆಗುತ್ತಿರುವ ತೊಂದರೆ ಹಾಗೂ ಹೊಸ ಪಡಿತರ ಚೀಟಿಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಗೊಂದಲವನ್ನು ಸರಿಪಡಿಸಲು ಆಗ್ರಹಿಸಿ ಸೋಮವಾರ ಸ್ಲಂ ಜನಾಂದೋಲನ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಹಾರ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರ ನೇತೃತ್ವ ವಹಿಸಿದ್ದ ಇಮ್ತಿಯಾಜ ಮಾನ್ವಿ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದ ಪ್ರತಿಯೊಂದು ಬಿ.ಪಿ.ಎಲ್ ಕುಟುಂಬಗಳಿಗೆ ತಲಾ 10.ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದೆಂದು ಘೋಷಣೆ ಮಾಡಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ನಂತರ ರಾಜ್ಯದಲ್ಲಿ ಅಕ್ಕಿ ಕೊರತೆಯಿಂದ ಬಿ.ಪಿ.ಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ ತಲಾ 5 ಕೆ.ಜಿ. ಅಕ್ಕಿ ಹಾಗೂ ಪ್ರತಿ ಸದಸ್ಯನಿಗೆ ಅಕ್ಕಿ ಜೊತೆಗೆ 170 ರುಪಾಯಿಗಳನ್ನು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರದ ಈ ಘೋಷಣೆಯಿಂದ ಸಾವಿರಾರು ಕುಟುಂಬಗಳಿಗೆ ಈ ವರೆಗೊ ಪಡಿತರ ಸಿಗದೇ ಹಾಗೂ ಹಣವವೂ ಸಿಗದೇ ಪ್ರತಿನಿತ್ಯ ಆಹಾರ ಇಲಾಖೆಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಗದಗ ಜಿಲ್ಲಾ ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೌಲಾಸಾಬ ಗಚ್ಚಿ, ಜಾಫರ ಢಾಲಾಯತ, ಶಂಕ್ರಪ್ಪ ರೋಣ, ವಿಶಾಲಕ್ಷಿ ಹಿರೇಗೌಡ್ರ, ವಂದನಾ ಶ್ಯಾವಿ, ಮಕ್ತುಮ ಮುಲ್ಲಾನವರ, ಇಬ್ರಾಹಿಂ ಮುಲ್ಲಾ, ಮಲೇಶಪ್ಪ ಕಲಾಲ, ಪ್ರಕಾಶ ಹಡಗಲಿ, ಸಾಕ್ರುಬಾಯಿ ಗೋಸಾವಿ, ದಾದು ಗೋಸಾವಿ, ಖಾಜೇಸಾಬ ಇಸ್ಮಾಯಿಲನವರ, ಸಲೀಮ ಕದಡಿ, ದುರ್ಗಪ್ಪ ಮಣಿವಡ್ಡರ, ಮಂಜುನಾಥ ಶ್ರೀಗಿರಿ, ಶಿವಾನಂದ ಶಿಗ್ಲಿ ಹಾಗೂ ವಿವಿಧ ಸ್ಲಂ ಪ್ರದೇಶದ ನೂರಾರು ಸ್ಲಂ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.