ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್ ಸಿಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು ನಿರ್ಮಿಸುವಂತೆ ಮನವಿ ಮಾಡಿದ್ದರು. ಅದರಂತೆ ಭಾನುವಾರ ಬಾವುಟಗುಡ್ಡೆಯಲ್ಲಿ ಶಂಕುಸ್ಥಾಪನೆ ನೆರವೇರಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲೇ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಆ ಪ್ರದೇಶದಲ್ಲಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.

ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರಿಗೆ ಈ ಕುರಿತು ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್ ಸಿಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು ನಿರ್ಮಿಸುವಂತೆ ಮನವಿ ಮಾಡಿದ್ದರು. ಅದರಂತೆ ಭಾನುವಾರ ಬಾವುಟಗುಡ್ಡೆಯಲ್ಲಿ ಶಂಕುಸ್ಥಾಪನೆ ನೆರವೇರಿತು.

ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಶಾಸಕರಾದ ವೇದವಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ , ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ‌ ಪ್ರವೀಣ್ ಚಂದ್ರ ಆಳ್ವ, ಮಾಜಿ ಶಾಸಕ ಹರೀಶ್ ಕುಮಾರ್,ಪಾಲಿಕೆ ಸದಸ್ಯರು ಇದ್ದರು.