ಸಾರಾಂಶ
ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜ್ಯದ ಜೆಡಿಎಸ್ ಅಧ್ಯಕ್ಷ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುಳೇದಗುಡ್ಡ ಭಾಗದ ಅವರ ಅನೇಕ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಗಿ ಅಭಿನಂದನೆಗಳನ್ನು ಸಲ್ಲಿಸಿದರು. ಅಲ್ಲದೇ, ಗುಳೇದಗುಡ್ಡ ಖಣದಿಂದ ತಯಾರಿಸಿದ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ
ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜ್ಯದ ಜೆಡಿಎಸ್ ಅಧ್ಯಕ್ಷ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುಳೇದಗುಡ್ಡ ಭಾಗದ ಅವರ ಅನೇಕ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಗಿ ಅಭಿನಂದನೆಗಳನ್ನು ಸಲ್ಲಿಸಿದರು. ಅಲ್ಲದೇ, ಗುಳೇದಗುಡ್ಡ ಖಣದಿಂದ ತಯಾರಿಸಿದ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಕುಮಾರಸ್ವಾಮಿಯವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಪಟ್ಟಣದ ಪುರಸಭೆ ಸದಸ್ಯ ಸಂತೋಷ ನಾಯನೇಗಲಿ, ಶರಣಪ್ಪ ಮಾವಿನಮರದ, ಪ್ರಕಾಶ ಕೋಟಿ, ನಂದೆಪ್ಪಣ್ಣ ನಂದಿಕೇಶ್ವರ, ಸಮರ್ಥ ಜಾಲಗೇರಿ, ತೋಪೇಶ ಬದಾಮಿ, ಪ್ರಕಾಶ ಕಳ್ಳಿಗುಡ್ಡ, ಹುಚ್ಚೇಶ ಹದ್ದನ್ನವರ್, ಬಸವರಾಜ ಚೊಳಚಗುಡ್ಡ, ಮಲ್ಲು ಹಡಪದ, ನಂದು ಪಾಟೀಲ ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಭಾಗವಸಿದ್ದರು.