ನಾಯಕ ಜನಾಂಗವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಜಿಲ್ಲಾ ನಾಯಕರ ಸಂಘದ ಎಂ.ರಾಮಚಂದ್ರ

| Published : Jul 08 2024, 12:33 AM IST

ನಾಯಕ ಜನಾಂಗವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಜಿಲ್ಲಾ ನಾಯಕರ ಸಂಘದ ಎಂ.ರಾಮಚಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ನಾಯಕ ಸಮುದಾಯದ ವಿದ್ಯಾರ್ಥಿಗಳು ಐಎಎಸ್, ಕೆಎಎಸ್ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು. ಚಾಮರಾಜನಗರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘದ ವಾರ್ಷಿಕೋತ್ಸವ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಾಯಕ ಸಮುದಾಯದ ವಿದ್ಯಾರ್ಥಿಗಳು ಐಎಎಸ್, ಕೆಎಎಸ್ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು.

ನಗರದ ಶ್ರೀಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘ, ನಾಯಕ ನೌಕರರ ಸ್ನೇಹ ಬಳಗ ಹಾಗೂ ಮಹರ್ಷಿ ಶ್ರೀ ವಾಲ್ಮೀಕಿ ನೌಕರರ ಸೌಹಾರ್ದ ಸಹಕಾರ ನಿಯಮಿತ ಸಹಯೋಗದಲ್ಲಿ 11ನೇ ವರ್ಷದ ವಾರ್ಷಿಕೋತ್ಸವ , ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿಯವರು ಮೊದಲೇ ಶಿಕ್ಷಣಕ್ಕೆ ಒತ್ತು ನೀಡಿದರು. ಲವಕುಶರಿಗೆ ವಿದ್ಯೆ ಕಲಿಸುವ ಮೂಲಕ ತಂದೆಯನ್ನು ವಿದ್ಯೆಯಲ್ಲಿ ಮೀರಿಸುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಾಗಾಗಿ ಸಮುದಾಯದ ಮಕ್ಕಳು ಅರ್ಧಕ್ಕೆ ಶಿಕ್ಷಣ ಮೊಟಕುಗೊಳಿಸಬಾರದು. ನಾವು ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ಸರ್ಕಾರಿ ಸೌಲಭ್ಯಗಳು ಕಡಿಮೆ ಇತ್ತು. ಇಂದು ಸರ್ಕಾರ ಪೋಷಕರಿಗೆ ಹೊರೆಯಾಗದ ರೀತಿಯಲ್ಲಿ ಉಚಿತ ಶಿಕ್ಷಣಕ್ಕೆ ಆರ್ಥಿಕ ನೆರವು, ಉಚಿತ ತರಬೇತಿ ನೀಡುತ್ತಿದೆ. ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಜನಾಂಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿರುವುದು ವಿದ್ಯಾರ್ಥಿಗಳ ಹೆಚ್ಚಿನ ಓದಿಗೆ ಪೂರಕವಾಗಿದ್ದು, ಜನಾಂಗದ ಮಕ್ಕಳ ಮತ್ತಷ್ಟು ಓದಿಗೆ ಪ್ರೇರಣೆಯಾಗಿದೆ. ಇಂತಹ ಪ್ರತಿಭಾ ಪುರಸ್ಕಾರ ಪಡೆದಿರುವ ವಿದ್ಯಾರ್ಥಿಗಳ ಜೀವನ ಉಜ್ವಲವಾಗಲಿ ಎಂದು ಆಶಿಸಿದರು.

100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ:

2023-24ನೇ ಸಾಲಿನ ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬ್ಯಾಗ್, ನೆನಪಿನ ಕಾಣಿಕೆ, ಪ್ರಮಾಣಪತ್ರ ನೀಡಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಇದೇ ಸಂದರ್ಭದಲ್ಲಿ ನಿವೃತ್ತ ನೌಕರನ್ನು ಸನ್ಮಾನಿಸಲಾಯಿತು. ಶಿಕ್ಷಕ ಲಿಂಗರಾಜು ಪ್ರಾಸ್ತಾವಿಕ ಭಾಷಣ ಮಾಡಿದರು.

ಜನಾಂಗದ ಮುಖಂಡ ಕೆಲ್ಲಂಬಳ್ಳಿ ಸೋಮನಾಯಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷ ಎಚ್.ವಿ.ಚಂದ್ರು, ಸಂಘದ ಅಧ್ಯಕ್ಷ ಕಣ್ಣೇಗಾಲ ಎಂ.ಶಿವಕುಮಾರ್, ಮುಖಂಡರಾದ ಚಂದಕವಾಡಿ ಕಪಿನಿನಾಯಕ, ಪು.ಶ್ರೀನಿವಾಸನಾಯಕ, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ಶಿಕ್ಷಕ ಕೆಂಪನಪುರ ಸಿದ್ದರಾಜು, ಹರದನಹಳ್ಳಿ ನಟರಾಜು, ನಿವೃತ್ತ ಪ್ರಾಂಶುಪಾಲ ಬಂಗಾರನಾಯಕ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಸುಂದರ್, ವಾಲ್ಮೀಕಿ ಟ್ರಸ್ಟ್ ಅಧ್ಯಕ್ಷ ಬಿ.ಕಾಂ.ಮಹದೇವನಾಯಕ, ಯ.ಮಹದೇವನಾಯಕ, ಯ.ರಾಜುನಾಯಕ, ಜ.ಸುರೇಶ್ ನಾಗ್, ಮುಖಂಡರಾದ ರಾಮನಾಯಕ, ಉಪನ್ಯಾಸಕ ನಾರಾಯಣಸ್ವಾಮಿ, ಗ್ರಾಪಂ ಅಧ್ಯಕ್ಷ ಆರ್.ಮಾದೇಶ್, ಸಂಘದ ಉಪಾಧ್ಯಕ್ಷ ಪೊಲೀಸ್ ನಾಗನಾಯಕ, ಗೌರವ ಅಧ್ಯಕ್ಷೆ ಮೀನಾಕ್ಷಿ, ಖಜಾಂಚಿ ಕರಿಯಪ್ಪ, ನಿರ್ದೇಶಕರಾದ ಲಿಂಗರಾಜು, ಮಂಜುನಾಥಸ್ವಾಮಿ, ಕೆಲ್ಲಂಬಳ್ಳಿ ನಾಗರಾಜು, ಮಹರ್ಷಿ ಶ್ರೀವಾಲ್ಮೀಕಿ ನೌಕರರ ಸೌಹಾರ್ದ ಸಹಕಾರ ನಿಯಮಿತ ಅಧ್ಯಕ್ಷ ಉಮೇಶ್, ಪ್ರಧಾನ ಕಾರ್ಯದರ್ಶಿ ಅರ್.ಚಂದ್ರು , ನಿರ್ದೇಶಕ ಆರ್.ಮಾದೇಶ್, ರಾಜೇಶ್, ಕಿಟ್ಟು, ಬಂಗಾರಸ್ವಾಮಿ, ನಾಗರತ್ನಮ್ಮ, ಶಿಕ್ಷಕರಾದ ಮಹದೇವಸ್ವಾಮಿ, ರಾಮಸ್ವಾಮಿ, ಜಗದೀಶ್, ಶಿವಕುಮಾರ್, ಚೇತನ್, ಶಿವರಾಂ, ಶಂಕರ್, ಬಿ.ಆರ್.ನಾಯಕ ಹಾಜರಿದ್ದರು.