ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟ ಪರಿಷತ್ ಚುನಾವಣೆ ಇತ್ತೀಚೆಗೆ ನಡೆಯಿತು. ನಡೆಯಿತು. ಕಾರ್ಯಕ್ರಮ ಅಂಗವಾಗಿ ವಿಜೇತ ಪ್ರತಿನಿಧಿಗಳ ಪದಗ್ರಹಣ ಸಮಾರಂಭವನ್ನು ಕಾಲೇಜಿನಲ್ಲಿ ಆಯೋಜಿಸಲಾಯಿತು.
ಪುತ್ತೂರು: ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟ ಪರಿಷತ್ ಚುನಾವಣೆ ಇತ್ತೀಚೆಗೆ ನಡೆಯಿತು. ನಡೆಯಿತು. ಕಾರ್ಯಕ್ರಮ ಅಂಗವಾಗಿ ವಿಜೇತ ಪ್ರತಿನಿಧಿಗಳ ಪದಗ್ರಹಣ ಸಮಾರಂಭವನ್ನು ಕಾಲೇಜಿನಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಗೋ ಲಕ್ಷ್ಮಿ ಎಂಟರ್‌ಪ್ರೈಸಸ್‌ನ ಮಾಲೀಕ ಹಾಗೂ ರಾಷ್ಟ್ರೀಯ ಜೆಸಿಐ ತರಬೇತುದಾರರಾದ ಕೃಷ್ಣ ಮೋಹನ್ ಪಿ. ಎಸ್. ಮಾತನಾಡಿ, ಚುನಾವಣೆಯಲ್ಲಿ ವಿಜೇತರಾದ ಹಾಗೂ ಸ್ಪರ್ಧಿಸಿದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ನಾಯಕತ್ವವು ಕೇವಲ ಹುದ್ದೆಯಲ್ಲ, ಅದು ಜವಾಬ್ದಾರಿಯಾಗಿದೆ ಎಂದರು. ದಾರಿ ತಿಳಿದಿರುವವನು ಮಾತ್ರವಲ್ಲ, ಇತರರಿಗೆ ದಾರಿ ತೋರಿಸುವವನೇ ನಿಜವಾದ ನಾಯಕ ಎಂದರು.
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ., ಶೈಕ್ಷಣಿಕ ಮಾರ್ಗದರ್ಶಕರಾದ ಅಭಿಲಾಷ್ ಕ್ಷತ್ರಿಯ, ವಿದ್ಯಾರ್ಥಿ ನಾಯಕ ಸೂರ್ಯ (ತೃತೀಯ ಬಿ.ಕಾಂ.) ಹಾಗೂ ಕಾರ್ಯದರ್ಶಿ ದೇವಿಕಾ (ತೃತೀಯ ಫ್ಯಾಷನ್ ಡಿಸೈನ್) ಉಪಸ್ಥಿತರಿದ್ದರು.ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ನೂತನ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪದಪ್ರದಾನ ನೆರವೇರಿಸಿದರು. ಗಣಕ ವಿಭಾಗದ ಉಪನ್ಯಾಸಕಿ ಸುಪ್ರಭ ಗಣ್ಯರನ್ನು ಪರಿಚಯಿಸಿದರು. ಕನ್ನಡ ಭಾಷಾ ಉಪನ್ಯಾಸಕಿ ರಶ್ಮಿತಾ ಎಸ್. ವಿಜೇತ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ರಶ್ಮಿ ಸ್ವಾಗತಿಸಿದರು. ಕಲಾ ವಿಭಾಗದ ಮುಖ್ಯಸ್ಥರಾದ ಅಶೋಕ್ ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕ ಅಮೃತ್ ರಾಜ್ ವೈ. ಆರ್. ನಿರೂಪಿಸಿದರು.