ಇಂದಿನ ಜಾಗತಿಕ ಯುಗದಲ್ಲಿ ಕೇವಲ ಪಠ್ಯ ಜ್ಞಾನ ಸಾಲದು, ಪ್ರಾಯೋಗಿಕ ಕೌಶಲ್ಯಗಳು ಉತ್ತಮ ಸಂವಾಹನ ಮತ್ತು ನಿರ್ಧಾರ ಸಾಮರ್ಥ್ಯ ಅಗತ್ಯ. ವ್ಯವಹಾರಿಕ ಕ್ಷೇತ್ರದಲ್ಲಿ ಬಿಬಿಎ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಕೊಳ್ಳುವುದರಿಂದ ಯಾವುದೇ ಉದ್ಯಮವನ್ನು ಆರಂಭಿಸುವ ಮೊದಲು ಸರಿಯಾದ ಯೋಜನೆ ಮಾಡುವುದು, ಅತ್ಯಂತ ಮುಖ್ಯ. ಎಂಬಿಎ ವ್ಯವಹಾರ ನಿರ್ವಹಣೆಯಲ್ಲಿನ ಉನ್ನತ ಶಿಕ್ಷಣವಾಗಿದ್ದು, ವಿದ್ಯಾರ್ಥಿಗಳಿಗೆ ನಿರ್ವಹಣಾ ಕೌಶಲ್ಯಗಳು ಮತ್ತು ನಾಯಕತ್ವ ಗುಣಗಳನ್ನು ಅಭಿವೃದ್ಧಿ ಪಡಿಸಲು ಸಹಾಯ ಮಾಡುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಹಾಗೂ ಎಐ ಬಗ್ಗೆ ತಿಳಿದುಕೊಂಡರೆ ವಿದ್ಯಾಭ್ಯಾಸದ ನಂತರ ಕೆಲಸ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ರಾಜೀವ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ರಾಜಶೇಖರ್‌ ಹೇಳಿದರು.

ನಗರದ ಆರ್.ಸಿ. ರಸ್ತೆ ಗಂಧದಕೋಠಿ ಆವರಣದಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗದ ವತಿಯಿಂದ ಬಿ.ಬಿ.ಎ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಜಾಗತಿಕ ಯುಗದಲ್ಲಿ ಕೇವಲ ಪಠ್ಯ ಜ್ಞಾನ ಸಾಲದು, ಪ್ರಾಯೋಗಿಕ ಕೌಶಲ್ಯಗಳು ಉತ್ತಮ ಸಂವಾಹನ ಮತ್ತು ನಿರ್ಧಾರ ಸಾಮರ್ಥ್ಯ ಅಗತ್ಯ. ವ್ಯವಹಾರಿಕ ಕ್ಷೇತ್ರದಲ್ಲಿ ಬಿಬಿಎ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಕೊಳ್ಳುವುದರಿಂದ ಯಾವುದೇ ಉದ್ಯಮವನ್ನು ಆರಂಭಿಸುವ ಮೊದಲು ಸರಿಯಾದ ಯೋಜನೆ ಮಾಡುವುದು, ಅತ್ಯಂತ ಮುಖ್ಯ. ಎಂಬಿಎ ವ್ಯವಹಾರ ನಿರ್ವಹಣೆಯಲ್ಲಿನ ಉನ್ನತ ಶಿಕ್ಷಣವಾಗಿದ್ದು, ವಿದ್ಯಾರ್ಥಿಗಳಿಗೆ ನಿರ್ವಹಣಾ ಕೌಶಲ್ಯಗಳು ಮತ್ತು ನಾಯಕತ್ವ ಗುಣಗಳನ್ನು ಅಭಿವೃದ್ಧಿ ಪಡಿಸಲು ಸಹಾಯ ಮಾಡುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಜೀವ್ ಸಂಸ್ಥೆಯ ಶೋಭ ಮಾತನಾಡಿ, ಹೆಣ್ಣು ಮಕ್ಕಳು ಯಾರ ಮೇಲು ಅವಲಂಬಿತರಾಗದೆ ತಮ್ಮ ಜೀವನವನ್ನು ತಾವೇ ನಿರ್ಮಿಸಿಕೊಳ್ಳಬೇಕು. ಶಿಕ್ಷಣ ಮತ್ತು ಆತ್ಮವಿಶ್ವಾಸದ ಮೂಲಕ ಅವರು ತಮ್ಮ ಗುರಿಗಳನ್ನು ಸಾಧಿಸಬಹುದು. ವೃತ್ತಿ ಕೌಶಲ್ಯಗಳು ವಿದ್ಯಾರ್ಥಿಗಳಲ್ಲಿ ಸ್ಪಷ್ಟವಾಗಿ ಆಲೋಚನೆಗಳನ್ನು ವ್ಯಕ್ತಪಡಿಸಲು ಸಹಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೌಶಲ್ಯಗಳನ್ನು ಬೆಳೆಸಿಕೊಂಡು, ಹೋಸ ತಂತ್ರಜ್ಞಾನಗಳನ್ನು ಕಲಿತು ಸವಾಲುಗಳನ್ನು ಎದುರಿಸಲು ಸಿದ್ದರಾಗಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಅಧ್ಯಕ್ಷತೆ ವಹಿಸಿದ್ದರು, ನಿರ್ವಹಣಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ. ಸ್ವಪ್ನ ಜಿ. ಆರ್‌, ತಬ್ರೆಜ್, ಯೋಗೇಶ್, ಅತೀಥ್ ಹಾಗೂ ಇತರರು ಹಾಜರಿದ್ದರು.