ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವು ನಡೆಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವು ನಡೆಯಿತು. ಮಂಗಳವಾರ ಸುಂಟಿಕೊಪ್ಪ ಕ್ಲಸ್ಟರ್ ಕೇಂದ್ರದ ವ್ಯಾಪ್ತಿಯ ಸರ್ಕಾರಿ ಮಾದರಿ ಕಲಿಕಾ ಹಬ್ಬವನ್ನು ಅಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಭಾಷೆ ಮತ್ತು ಗಣಿತದ ವಿಷಯಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರಂಭದಲ್ಲಿ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜೆ.ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಯು.ರಫೀಕ್‌ಖಾನ್, ಶಾಲಾ ಮುಖ್ಯೋಪಾಧ್ಯಾಯರಾದ ಪಿ.ಇ.ನಂದ ಸಹಶಿಕ್ಷಕಿ ಸೌಭಾಗ್ಯ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾದ ಸೀಮಾ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಬಾಲಕೃಷ್ಣ ಶಿಕ್ಷಕರು ಪೋಷಕರು ಪಾಲ್ಗೊಂಡಿದ್ದರು.