ಹೊಸದುರ್ಗ ತಾಲೂಕಿನ ಎಂ.ಜಿ.ದಿಬ್ಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜರುಗಿದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಬಿಆರ್‌ಸಿ ಶ್ರೀನಿವಾಸ್ ಉದ್ಘಾಟಿಸಿದರು.

ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್ ಅಭಿಮತಕನ್ನಡಪ್ರಭ ವಾರ್ತೆ ಹೊಸದುರ್ಗ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬವು ಪೂರಕವಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್ ಅಭಿಪ್ರಾಯಪಟ್ಟರು.

ತಾಲೂಕಿನ ಎಂ.ಜಿ ದಿಬ್ಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜರುಗಿದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಉತ್ತಮ ಬೋಧನೆ ಮಾಡುತ್ತಾರೆ ಯಾದರೂ ಮನೆಯಲ್ಲಿ ಪಾಲಕರು ಸಹ ಕಾಲ ಕಾಲಕ್ಕೆ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿ ಕಲಿಕೆಗೆ ಅಗತ್ಯವಾದ ವಾತಾವರಣ ನಿರ್ಮಿಸಬೇಕಿದೆ ಎಂದರು.

ಕಲಿಕಾ ಹಬ್ಬದಲ್ಲಿ ಮಾಡು-ಆಡು, ಹಾಡು, ಕಾಗದ-ಕತ್ತರಿ, ಬಣ್ಣ, ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಾಡುವ ಮೂಲಕ ಗ್ರಾಮೀಣ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಯ ಆಸಕ್ತಿಯನ್ನು ಗುರುತಿಸಿ ಉತ್ತೇಜನ ನೀಡಲಾಗುತ್ತಿದೆ ಎಂದರು.

ಶಿಕ್ಷಣ ಸಂಯೋಜಕ ಶಶಿಧರ್.ಎಂ.ಮಾತನಾಡಿ, ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ಧಿಸಲು ಕಲಿಕಾ ಹಬ್ಬ ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಕಂಗುವಳ್ಳಿ ಮಾತನಾಡಿ,

ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವುದು ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಓದಿನತ್ತ ಆಕರ್ಷಿಸಿ ಜಾಗೃತಿ ಮೂಡಿಸುವುದೇ ಕಲಿಕಾ ಹಬ್ಬದ ಮೂಲ ಆಶಯವಾಗಿದೆ ಎಂದರು.

ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶಿವಮೂರ್ತಿ, ಗ್ರಾ.ಪಂ ಉಪಾಧ್ಯಕ್ಷ ಮೀನಾಕ್ಷಮ್ಮ, ಪಿಡಿಒ ಜಯಣ್ಣ, ದೖಹಿಕ ಶಿಕ್ಷಣ ಸಹಾಯಕ ನಿರ್ದೇಶಕ ಶ್ರೀನಿವಾಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಬಸವರಾಜ್, ಬಿಆರ್‌ಪಿಗಳಾದ ಸುರೇಂದ್ರ ನಾಯ್ಕ್, ರಾಘವೇಂದ್ರ, ಸಿಆರ್‌ಪಿ ಪ್ರಮೀಳಾ, ಎಸ್‌ಡಿಎಂಸಿ ಅಧ್ಯಕ್ಷ ಓಂಕಾರಪ್ಪ, ಮುಖ ಶಿಕ್ಷಕರಾದ ಅನುಸೂಯಮ್ಮ, ಲೋಕೇಶ್ವರಪ್ಪ, ಕೆ.ಎಸ್.ಮಂಜುನಾಥ್, ಕ್ಲಸ್ಟರ್ ವ್ಯಾಪ್ತಿಯ ಮುಖ್ಯ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.