ಬಾಳೆಹೊನ್ನೂರುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಣ್ಣು ಮಕ್ಕಳಿಗೆ ಮಾನವೀಯ ಮೌಲ್ಯ ಮತ್ತು ಸಂಸ್ಕಾರ ಕಲಿಸುತ್ತಿದೆ ಎಂದು ಎನ್.ಆರ್.ಪುರದ ಉಪನ್ಯಾಸಕ ಮಧುರ ಮಂಜುನಾಥ ಹೇಳಿದರು.
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಣ್ಣು ಮಕ್ಕಳಿಗೆ ಮಾನವೀಯ ಮೌಲ್ಯ ಮತ್ತು ಸಂಸ್ಕಾರ ಕಲಿಸುತ್ತಿದೆ ಎಂದು ಎನ್.ಆರ್.ಪುರದ ಉಪನ್ಯಾಸಕ ಮಧುರ ಮಂಜುನಾಥ ಹೇಳಿದರು.ಪಟ್ಟಣದ ನಾರಾಯಣಗುರು ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆ ಮೊಬೈಲ್, ಟಿವಿಗಳಿಂದ ಸಂಸ್ಕಾರ, ಸಂಸ್ಕೃತಿ ಮರೆಯುತ್ತಿದ್ದಾರೆ. ಯುವಜನರು ಪೂಜೆ ಮತ್ತು ಅದರ ಮಹತ್ವ ಅರಿತುಕೊಳ್ಳದೆ ದೇವರಲ್ಲಿ ಭಕ್ತಿ ಕಾಣಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರು ಹಲವು ವರ್ಷಗಳಿಂದ ಧಾರ್ಮಿಕ ಕಾರ್ಯಕ್ರಮಗಳ ಮುಖಾಂತರ ಸಮಾಜಕ್ಕೆ ಉತ್ತಮ ಸಂಸ್ಕಾರ ಕಲಿಸುತ್ತಿದ್ದಾರೆ ಎಂದರು.ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ಧಿ ಕಾರ್ಯವೈಖರಿಗಳು ಶ್ಲಾಘನೀಯ. ಬಡವರಿಗೆ, ನೊಂದವರಿಗೆ ಬೆಳಕಾಗುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ ಎಂದರು.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಯಜ್ಞ ಪುರುಷಭಟ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಂದು ಸಂಸ್ಕಾರ ಕಲಿಸುವ ಕೇಂದ್ರವಾಗಿದ್ದು, ರಾಜ್ಯಾದ್ಯಂತ ಸಂಸ್ಥೆ ಪ್ರಾರಂಭಿಸಿ ಸಂಘಟನೆಯ ಮೂಲಕ ಧಾರ್ಮಿಕ ಮನೋಭಾವನೆ ಬೆಳೆಸುತ್ತಿದೆ. ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಆಗುವಂತಹ ಯೋಜನೆಗಳನ್ನು ರೂಪಿಸಿದೆ. ಎಷ್ಟೋ ಕುಟುಂಬಗಳು ಸಂಘದ ವತಿಯಿಂದ ಅನುದಾನ ಹಾಗೂ ಸಾಲವನ್ನು ಪಡೆದು ಸ್ವಾವಲಂಬಿ ಬದುಕನ್ನು ಕಾಣುತ್ತಿವೆ ಎಂದರು. ಶೃಂಗೇರಿ ಯೋಜನಾಧಿಕಾರಿ ಸುರೇಶ್ ಮಾತನಾಡಿ ಡಾ.ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯಿಂದ 44 ವರ್ಷಗಳ ಹಿಂದೆ ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸ್ಥಾಪನೆ ಮಾಡಿದ್ದು, ಬೆಂಗಳೂರು ಹೊರತುಪಡಿಸಿ 45000 ಕಾರ್ಯಕರ್ತರು ಸಂಸ್ಥೆಯಲ್ಲಿ ತೊಡಗಿ ಸಿಕೊಂಡಿದ್ದಾರೆ ಎಂದು ತಿಳಿಸಿದರು.ಬಿ.ಕಣಬೂರು ಗ್ರಾಪಂ ಅಧ್ಯಕ್ಷ ರವಿಚಂದ್ರ, ಕರ್ಕೇಶ್ವರ ಗ್ರಾಪಂ ಅಧ್ಯಕ್ಷ ರಾಜೇಶ್ ಕೇಶವತ್ತಿ, ಮಾಜಿ ಅಧ್ಯಕ್ಷ ಎಂ.ಆರ್.ದಿನಕರ್, ಹಿರೇಗದ್ದೆ ಗ್ರಾಪಂ ಅಧ್ಯಕ್ಷೆ ಜ್ಯೋತಿ, ಮಾಜಿ ಅಧ್ಯಕ್ಷ ಬಿ.ಎಂ.ಸುದೇವ್ ನಾಯಕ್, ಆಡುವಳ್ಳಿ ಗ್ರಾಪಂ ಅಧ್ಯಕ್ಷ ಎಂ.ವಿ.ಶ್ರೀನಿವಾಸಗೌಡ, ಕಜಾಪ ತಾಲ್ಲೂಕು ಅಧ್ಯಕ್ಷ ಸತೀಶ್ ಅರಳೀಕೊಪ್ಪ, ಬಗರ್‌ಹುಕುಂ ಸಮಿತಿ ಸದಸ್ಯೆ ಹೇಮಲತಾ ಪ್ರಭಾಕರ್, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಶಿವಕುಮಾರ್, ರೋಹಿಣಿ, ರಜನಿ, ರಮೇಶ್, ಮೋಹನ್, ಸುರೇಖಾ ಮತ್ತಿತರರು ಹಾಜರಿದ್ದರು.೦೩ಬಿಹೆಚ್‌ಆರ್ ೨: ಬಾಳೆಹೊನ್ನೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯನ್ನು ಕರ್ಕೇಶ್ವರ ಗ್ರಾಪಂ ಅಧ್ಯಕ್ಷ ರಾಜೇಶ್ ಕೇಶವತ್ತಿ ಉದ್ಘಾಟಿಸಿದರು. ಎಂ.ಎಸ್.ಚನ್ನಕೇಶವ, ಮಧುರಾ, ಸುರೇಶ್, ರವಿಚಂದ್ರ, ದಿನಕರ್, ಇದ್ದರು.