ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ: ಭಾರತಿ

| Published : Aug 12 2024, 12:45 AM IST

ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ: ಭಾರತಿ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ. ಕಲಿಕೆಯ ದಿನಗಳಲ್ಲಿ ವಿದ್ಯಾರ್ಥಿಗಳು, ಅದರಲ್ಲೂ ಪದವಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಸಲಹೆ ನೀಡಿದರು.

ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ಕನ್ನಡಪ್ರಭ ವಾರ್ತೆ, ಶೃಂಗೇರಿ

ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ. ಕಲಿಕೆಯ ದಿನಗಳಲ್ಲಿ ವಿದ್ಯಾರ್ಥಿಗಳು, ಅದರಲ್ಲೂ ಪದವಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಸಲಹೆ ನೀಡಿದರು,

ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ, ಬಿಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಪದವಿ ಶಿಕ್ಷಣ ವ್ಯಾಸಂಗದ ಕೊನೆಯಲ್ಲಿ ಮುಂದೇನು ಎಂಬ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗುವುದು ಸಹಜ. ಆದ್ದರಿಂದ ಪದವಿ ಹಂತದಲ್ಲಿಯೇ ಭವಿಷ್ಯದ ಗುರಿಗಳ ಬಗ್ಗೆ ಯೋಚಿಸಬೇಕು.

ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಇನ್ನಿತರೆ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆ ಅನಾವರಣ ಗೊಳಿಸಬೇಕು. ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಉತ್ತಮ ವ್ಯಕ್ತಿತ್ವ ರೂಪಿಸಿ ಕೊಳ್ಳಬಹುದಾಗಿದೆ. ಕಾಲೇಜಿನಲ್ಲಿ ಎನ್ಎಸ್ಎಸ್ ನಂತಹ ಸಂಘಟನೆಯಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿ ಕೊಳ್ಳಲು ಪೂರಕ ಅವಕಾಶ ಕಲ್ಪಿಸಿಕೊಡುತ್ತದೆ. ಶಿಕ್ಷಣ ನಿಂತ ನೀರಾಗದೇ, ಸದಾ ಹರಿಯುತ್ತಿರುವ ನದಿಯಂತಾಗಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ.ಆಶಾ ಬಿ.ಜಿ, ಎನ್ಎಸ್ಎಸ್ ಘಟಕ 1 ರ ಸಂಚಾಲಕ ಮಂಜುನಾಥ್ ಡಿ.ಎಸ್, ಘಟಕ 2 ರ ಸಂಚಾಲಕ ರಾಘವೇಂದ್ರ ರೆಡ್ಡಿ, ರಾಜ್ಯಶಾಸ್ತ್ರ ವಿಭಾಗದ ಆಶಾ ಬಾರ್ಕೂರು,ಅರ್ಥಶಾಸ್ತ್ರ ವಿಭಾಗದ ತೇಜಸ್ವಿನಿ, ದೈಹಿಕ ಶಿಕ್ಷಣ ವಿಭಾಗದ ರವಿಶಂಕರ್, ರಾಘವೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಮನರಂಜನಾ ಕಾರ್ಯಕ್ರಮ ನಡೆಯಿತು.

11 ಶ್ರೀ ಚಿತ್ರ 2-

ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ, ಬಿಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.