ಒತ್ತುವರಿ ಭೂಮಿ ಗುತ್ತಿಗೆ : ಅಧಿಸೂಚನೆ ಹಿಂಪಡೆಯಲು ಆಗ್ರಹ

| Published : Mar 23 2024, 01:02 AM IST

ಸಾರಾಂಶ

ಒತ್ತುವರಿ ಭೂಮಿಯನ್ನು ಗುತ್ತಿಗೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ಭೂಮಿ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಭೂಮಿ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಒತ್ತುವರಿ ಭೂಮಿಯನ್ನು ಗುತ್ತಿಗೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ಭೂಮಿ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭೂ ಮಾಲೀಕರು ಒತ್ತುವರಿ ಮಾಡಿರುವ 25ರಿಂದ 30 ಎಕರೆವರೆಗಿನ ಭೂಮಿಯನ್ನು 30 ವರ್ಷಗಳ ಕಾಲ ಗುತ್ತಿಗೆ ನೀಡುವ ಸರ್ಕಾರದ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದರು.

ಜಿಲ್ಲೆಯಲ್ಲಿ ಭೂ ಒತ್ತುವರಿ ಸಮಸ್ಯೆ ಗಂಭೀರವಾಗಿದ್ದು, ದಲಿತ, ಕಾರ್ಮಿಕ, ಬಡವ, ಸಣ್ಣ, ಅತಿಸಣ್ಣ ಭೂಹಿಡುವಳಿ ಜೊತೆಗೆ ಭೂಮಿ ಇಲ್ಲದವರು, 3-4 ಎಕರೆಯಷ್ಟು ಸಣ್ಣ ಸಣ್ಣ ಒತ್ತುವರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ, ದೊಡ್ಡ ಬೆಳೆಗಾರರು ತಮ್ಮ ಭೂಮಿಯೊಂದಿಗೆ ಸರ್ಕಾರಿ ಭೂಮಿಗೆ ಬೇಲಿ ಹಾಕಿಕೊಂಡಿದ್ದು ಅವರಿಗೆ ಸರ್ಕಾರ ಗುತ್ತಿಗೆಗೆ ನೀಡಲು ಹೊರಟಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. ಸಣ್ಣ ಹಿಡುವಳಿದಾರರು ಸಾಗುವಳಿ ಭೂಮಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮನೆಗಳಿಗೆ ಹಕ್ಕುಪತ್ರ ನೀಡಬೇಕು, ಸಮುದಾಯಭವನ, ನಿವೇಶನ ರಹಿತರಿಗೆ ನಿವೇಶನ, ಸ್ಮಶಾನಕ್ಕೆ ಜಾಗ, ಅಂಗನವಾಡಿ, ಆಸ್ಪತ್ರೆಗಳಿಗೆ ಜಾಗ ಮೀಸಲಿರಿ ಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಮರ್ಲೆ ಅಣ್ಣಯ್ಯ, ದಂಟರಮಕ್ಕಿ ಶ್ರೀನಿವಾಸ್, ಐ.ಎಂ. ಪೂರ್ಣೇಶ್, ಐ.ಕೆ ನಾಗೇಶ್, ಬಿ.ರುದ್ರಯ್ಯ, ಕೂದುವಳ್ಳಿ ಮಂಜು, ಕೆ.ಕೆ. ಕೃಷ್ಣಪ್ಪ, ವೈ.ಎಂ. ಹೊನ್ನಪ್ಪ, ಉಮೇಶ್‌ಕುಮಾರ್, ಪುರ ಚಂದ್ರಶೇಖರ್, ಅಂಗಡಿ ಚಂದ್ರು ಸೇರಿದಂತೆ ಹಲವರು ಭಾಗವಹಿಸಿದ್ದರು.

22 ಕೆಸಿಕೆಎಂ 4ಒತ್ತುವರಿ ಭೂಮಿಯನ್ನು ಗುತ್ತಿಗೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ಭೂಮಿ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಚಿಕ್ಕಮಗಳೂರಿನ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು.