ಬಿಜೆಪಿ ಮಂಡಲ ಅಧ್ಯಕ್ಷ ಬೆಣಕಲ್‌ ಪ್ರಕಾಶ್ ಮಾತನಾಡಿ, ಕಾಂಗ್ರೆಸ್‌ ದುರಾಡಳಿತ ನೋಡಿ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡುತ್ತಿಲ್ಲ. ಬೇಸತ್ತು ಸಾಕಷ್ಟು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಹೇಳಿದರು.

ಮರಿಯಮ್ಮನಹಳ್ಳಿ: ಮರಿಯಮ್ಮನಹಳ್ಳಿ ಹೋಬಳಿಯಲ್ಲಿ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಕೃಷ್ಣನಾಯ್ಕ ನೇತೃತ್ವದಲ್ಲಿ ಕೆಲವು ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ಗೊಲ್ಲರಹಳ್ಳಿ ಗ್ರಾಮದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಬೆಣಕಲ್‌ ಪ್ರಕಾಶ್ ಮಾತನಾಡಿ, ಕಾಂಗ್ರೆಸ್‌ ದುರಾಡಳಿತ ನೋಡಿ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡುತ್ತಿಲ್ಲ. ಬೇಸತ್ತು ಸಾಕಷ್ಟು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಶಿಸ್ತುಬದ್ಧ ಪಕ್ಷವಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ದೊರಕಿಸಿಕೊಡುವುದನ್ನು ಕಣ್ಣಾರೆ ಕಂಡಿರುವ ಕಾರ್ಯಕರ್ತರು ಈಗ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠಗೊಂಡಿದೆ ಎಂದರು.

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಬಲ್ಲಹುಣಿಸಿ ರಾಮಣ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್‌. ಕೃಷ್ಣನಾಯ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್, ಜಿಲ್ಲಾ ಕಾರ್ಯದರ್ಶಿ ವೀರಶ್ವರಸ್ವಾಮಿ, ಡಿ. ರಾಘವೇಂದ್ರ ಶೆಟ್ಟಿ ಮಾತನಾಡಿದರು.

ಬಿಜೆಪಿ ಸ್ಥಳೀಯ ಮುಖಂಡ ಗುಂಡಾ ಕೃಷ್ಣ, ಗಂಡಿ ಬಸವರಾಜ, ನವೀನ್‌, ಕೊಟ್ರೇಶ್‌, ಸಿ.ಡಿ. ಶೇಖರ್‌, ರವಿಕಿರಣ್‌, ಲಕ್ಷ್ಮಣ, ಬ್ಯಾಲಕುಂದಿ ಶ್ರೀನಿವಾಸ, ಹನುಮಾನಾಯ್ಕ ಭಾಗವಹಿಸಿದ್ದರು. ಗೊಲ್ಲರಹಳ್ಳಿ, ತಿಮ್ಮಲಾಪುರ, ಪೋತಲಕಟ್ಟೆ, ಗರಗ ಮತ್ತು ದೇವಲಾಪುರ ಗ್ರಾಮದ ಕೆಲವು ಮುಖಂಡರು ಹಾಗೂ ಯುವಕರು ಬಿಜೆಪಿ ಸೇರ್ಪಡೆಗೊಂಡರು.