ಸಾರಾಂಶ
ಕನ್ನಡಪ್ರಭ ವಾರ್ತೆ ಹಲಗೂರು
ಪದವಿ ಮುಗಿಸಿ ಕಾಲೇಜಿನಿಂದ ಹೊರ ಹೋಗುವುದು ದುಃಖದ ವಿಚಾರವಾಗಿದೆ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಶಿಕಲಾ ಹೇಳಿದರು.ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ 2024- 25 ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಮೂರು ವರ್ಷಗಳಿಂದ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಸ್ನೇಹಿತರು, ಗುರುಗಳು, ಕಾಲೇಜಿನ ವಾತಾವರಣವನ್ನು ಬಿಟ್ಟು ಹೋಗುವ ಸನ್ನಿವೇಶ ಒಂದು ರೀತಿಯ ದುಃಖದ ಸನ್ನಿವೇಶವನ್ನು ಸೃಷ್ಟಿಸಲಿದೆ ಎಂದರು.
ಪದವಿ ಮುಗಿಸಿದ ವಿದ್ಯಾರ್ಥಿಗಳು ಮುಂದಿನ ದಿನಗಳು ಭವಿಷ್ಯದ ಜೀವನವನ್ನು ರೂಪಿಸುತ್ತದೆ ಎಂಬುದನ್ನು ನೆನೆಯುತ್ತಾ ಸಂತೋಷ ಪಡುವುದು ಒಂದು ಸನ್ನಿವೇಶವಾಗಿದೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಆಲಂಗೂರ್ ಮಂಜುನಾಥ್ ಮಾತನಾಡಿ, ಕಾಲೇಜಿನ ಆವರಣದಲ್ಲಿ ಭವ್ಯ ಕಟ್ಟಡ ನಿರ್ಮಾಣಕ್ಕೆ ಶಾಸಕ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಕಾರಣಕರ್ತರು ಎಂದರು.
ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಉನ್ನತ ಶಿಕ್ಷಣದ ಅನುಕೂಲಕ್ಕಾಗಿ ಬಿಸಿಎಂ ಹಾಸ್ಟೆಲ್ ಸೌಲಭ್ಯ ಮತ್ತು ಎಸ್ಸಿ, ಎಸ್ಟಿ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಬಿಸಿಎಂ ಹಾಸ್ಟೆಲ್ ಪ್ರಾರಂಭವಾಗಿದೆ. ಈ ಭಾಗದ ಅನೇಕ ವಿದ್ಯಾರ್ಥಿನಿಯರಿಗೆ ಇದು ಅನುಕೂಲವಾಗಿದೆ. ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿವೃದ್ಧಿಯ ರೂವಾರಿಗಳು ಮತ್ತು ಶಿಕ್ಷಣ ರಂಗದ ಚಿಂತಕರು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಕ್ರೀಡೆಗಳಲ್ಲಿ ಹಾಗೂ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ, ನೆನಪಿನ ಕಾಣಿಕೆ ನೀಡಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಗ್ರಾಪಂ ಉಪಾಧ್ಯಕ್ಷೆ ಲತಾ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಸುಧಾ ಬಿದರಿ, ಕ್ರೀಡಾ ಸಮಿತಿ ಸಂಚಾಲಕ ಗುರುಪ್ರಸಾದ್, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಮಹೇಶ್ ಬಾಬು ಮತ್ತು ಸೀಮಾ ಕೌಸರ್, ತಾರಾ ಮಾತನಾಡಿದರು.ಸಮಾರಂಭದಲ್ಲಿ ಕುಮಾರಸ್ವಾಮಿ, ಇತಿಹಾಸ ವಿಭಾಗದ ರವಿ , ಕ್ರೀಡಾ ವಿಭಾಗದ ಚಂದ್ರು, ಕನ್ನಡ ವಿಭಾಗದ ಪ್ರೊ.ಮೂರ್ತಿ, ಗಿರೀಶ್, ಅರ್ಥಶಾಸ್ತ್ರ ವಿಭಾಗದ ರಮ್ಯಾ, ರಾಜ್ಯಶಾಸ್ತ್ರ ವಿಭಾಗದ ಶಿವಮ್ಮ, ವಾಣಿಜ್ಯ ಶಾಸ್ತ್ರ ವಿಭಾಗದ ರಘು, ಉಮೇಶ್ , ಕಂಪ್ಯೂಟರ್ ಆಪರೇಟರ್ ಶ್ರೀಧರ್, ಕಚೇರಿ ಸಹಾಯಕರಾದ ಶ್ರೀಮತಿ ಗೌರಮ್ಮ ಸೇರಿ ಇತರರು ಇದ್ದರು.