‘ಸಿಎಸ್‌ಆರ್‌ ಮತ್ತು ಸುಸ್ಥಿರ ಅಭಿವೃದ್ಧಿ’ ಉಪನ್ಯಾಸ

| Published : Jun 19 2024, 01:04 AM IST

‘ಸಿಎಸ್‌ಆರ್‌ ಮತ್ತು ಸುಸ್ಥಿರ ಅಭಿವೃದ್ಧಿ’ ಉಪನ್ಯಾಸ
Share this Article
  • FB
  • TW
  • Linkdin
  • Email

ಸಾರಾಂಶ

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಸಿಎಸ್‌ಆರ್ ಮತ್ತು ಸುಸ್ಥಿರ ಅಭಿವೃದ್ದಿ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಎಚ್.ಎಸ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಸಿಎಸ್‌ಆರ್ ಮತ್ತು ಸುಸ್ಥಿರ ಅಭಿವೃದ್ದಿ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು.

ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಎಚ್.ಎಸ್ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ನಿರ್ವಹಣಾ ಶಾಸ್ತ್ರ ವಿಭಾಗ ಮುಖ್ಯಸ್ಥ ಮಂಜುನಾಥ್‌ ಆರ್‌. ಮಾತನಾಡಿ, ವಿದ್ಯಾರ್ಥಿಗಳು ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಿಸಿಸುವ ಸಾಮಾಜಿಕ ಜವಾಬ್ದಾರಿ ಬೆಳಿಸಿಕೊಳ್ಳುವುದರ ಮೂಲಕ ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಸಂತ ಅನ್ನಮ್ಮ ಕಾಲೇಜಿನ ಐಕ್ಯೂಎಸಿ ಸಂಚಾಲಕ ಹಾಗೂ ಸಹಾಯಕ ಪ್ರಾಧ್ಯಾಪಕ ಹೇಮಾ ಬಿ.ಡಿ. ಮಾತನಾಡಿ, ವಿದ್ಯಾರ್ಥಿಗಳಿಗೆ ಕಂಪನಿಗಳು ತಮ್ಮ ಲಾಭಾಂಶವನ್ನು ಕಂಪನಿಗಳ ಸಾಮಾಜಿಕ ಜವಾಬ್ದಾರಿಗಳ ಮೂಲಕ ವಿನಿಯೋಗಿಸಿ ಆರ್ಥಿಕ ಹಾಗೂ ಸಾಮಾಜಿಕ ಸುಸ್ಥಿರ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿವೆ ಎಂದು ವಿವರಿಸಿದರು.

ಅಂತಿಮ ಬಿಬಿಎ ವಿದ್ಯಾರ್ಥಿನಿ ಶೃತಿಕಾ ನಿರ್ವಹಿಸಿದರು. ಉಪನ್ಯಾಸಕ ಸುಮಯ್ಯ ತಬಸುಮ್ ಸಂಪೂನ್ಮೂಲ ವ್ಯಕ್ತಿ ಪರಿಚಯ ಮಾಡಿದರು.

ನಿರ್ವಹಣಾ ವಿಭಾಗದ ಉಪನ್ಯಾಸಕ ಕಾರ್ಯಪ್ಪ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.