ಸಾರಾಂಶ
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಮತ್ತು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಜಂಟಿ ಆಶ್ರಯದಲ್ಲಿ ರಾಣಿ ಅಬ್ಬಕ್ಕ-೫೦೦ ಪ್ರೇರಣಾದಾಯಿ ಉಪನ್ಯಾಸಗಳ ಸರಣಿ-ಎಸಳು ೪೦ ಕಾರ್ಯಕ್ರಮ ಗುರುವಾರ ಕಾಲೇಜಿನಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಮತ್ತು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಜಂಟಿ ಆಶ್ರಯದಲ್ಲಿ ರಾಣಿ ಅಬ್ಬಕ್ಕ-೫೦೦ ಪ್ರೇರಣಾದಾಯಿ ಉಪನ್ಯಾಸಗಳ ಸರಣಿ-ಎಸಳು ೪೦ ಕಾರ್ಯಕ್ರಮ ಗುರುವಾರ ಕಾಲೇಜಿನಲ್ಲಿ ನಡೆಯಿತು.ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯ ಸಹ ಕಾರ್ಯದರ್ಶಿ ಲತೇಶ್ ಬಾಕ್ರಬೈಲ್, ಉಳ್ಳಾಲವನ್ನು ಆಳ್ವಿಕೆ ಮಾಡಿದ ರಾಣಿ ಅಬ್ಬಕ್ಕನ ಸಾಧನೆ ಮತ್ತು ದೇಶಪ್ರೇಮದ ಬಗ್ಗೆ ತಿಳಿಸಿದರು.ಕಾಲೇಜಿನ ಪ್ರಾಂಶುಪಾಲೆ ಡಾ. ರಾಜಲಕ್ಷ್ಮೀ ಎಸ್. ರೈ, ಉಪ ಪ್ರಾಂಶುಪಾಲ ಶೇಷಗಿರಿ ಎಂ., ಐಕ್ಯೂಎಸಿ ಸಂಘಟಕಿ ಕೌಸಲ್ಯ, ಇತಿಹಾಸ ವಿಭಾಗದ ಮುಖ್ಯಸ್ಥೆ ಪ್ರತಿಭಾ ಎಸ್. ಉಪಸ್ಥಿತರಿದ್ದರು.ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ಪದಾಧಿಕಾರಿಯಾದ ಡಾ. ಪ್ರಮೋದ್ ಎಂ.ಜಿ. ಸ್ವಾಗತಿಸಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸಂಘಟಕಿ ಸ್ವಸ್ತಿಕ್ ಕೆ. ವಂದಿಸಿದರು.