ದೊಡ್ಡಹುಲ್ಲೂರಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

| Published : Apr 27 2025, 01:31 AM IST

ಸಾರಾಂಶ

ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ದೊಡ್ಡಹುಲ್ಲೂರು ಗ್ರಾಮದ ರಂಜಿತ್‌ ಎಚ್.ಎನ್.ಆರ್, ವೆಂಕಟೇಶ್, ಶಿವಕುಮಾರ್ ಹಾಗೂ ಬೆಂಬಲಿಗರು ಬಿಜೆಪಿ ಪಕ್ಷವನ್ನು ತೊರೆದು ಶಾಸಕ ಶರತ್ ಬಚ್ಚೇಗೌಡ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ದೊಡ್ಡಹುಲ್ಲೂರು ಗ್ರಾಮದ ರಂಜಿತ್‌ ಎಚ್.ಎನ್.ಆರ್, ವೆಂಕಟೇಶ್, ಶಿವಕುಮಾರ್ ಹಾಗೂ ಬೆಂಬಲಿಗರು ಬಿಜೆಪಿ ಪಕ್ಷವನ್ನು ತೊರೆದು ಶಾಸಕ ಶರತ್ ಬಚ್ಚೇಗೌಡ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ನಾನು ಶಾಸಕನಾದ ದಿನದಿಂದ ತಾಲೂಕಿನ ಸಮಗ್ರ ಅಬಿವೃದ್ಧಿಗೆ ಪಕ್ಷಾತೀತ, ಧರ್ಮಾತೀತವಾಗಿ ಶ್ರಮಿಸುತ್ತಿದ್ದು ನನ್ನ ಅಭಿವೃದ್ಧಿ ಕಾರ್ಯಗಳನ್ನುಮೆಚ್ಚಿ ಪಕ್ಷಕ್ಕೆ ಯಾರೆ ಬಂದರೂ ಸ್ವಾಗತ. ಇದರಿಂದ ಮತ್ತಷ್ಟು ಅಬಿವೃದ್ಧಿಗೆ ಪ್ರೇರಣೆ ಆಗಲಿದೆ ಎಂದರು.

ಬಮುಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಹಗರಣ ರಹಿತ ದಕ್ಷ ಆಡಳಿತ ನೀಡುತಿದ್ದು, ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಕಾಂಗ್ರೆಸ್ ಜನಪರ ಕಾಳಜಿಯನ್ನು ಮೆಚ್ಚಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ತುಂಬಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಬಿ.ವಿ.ಬೈರೇಗೌಡ, ಬಿಎಂಆರ್‌ಡಿ ಸದಸ್ಯ ಡಾ.ಎಚ್.ಎಂ.ಸುಬ್ಬರಾಜು, ಡಾ.ಸಿ.ಜಯರಾಜ್, ಹುಲ್ಲೂರು ರಾಜ್‌ಗೋಪಾಲ್ ಇತರರು ಹಾಜರಿದ್ದರು.

ಪೋಟೋ :– 26 ಹೆಚ್‌ಎಸ್‌ಕೆ 3

ಹೊಸಕೊಟೆ ತಾಲೂಕಿನ ದೊಡ್ಡಹುಲ್ಲೂರು ಗ್ರಾಮದಲ್ಲಿ ಶಾಸಕ ಶರತ್‌ ಬಚ್ಚೇಗೌಡ ಸಮ್ಮುಖದಲ್ಲಿ ಗ್ರಾಮದ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.