ಹೇರೂರು ಗ್ರಾಮದ ಮುಖಂಡ ಮಲ್ಲಿಕಾರ್ಜುನ ಕಳ್ಳಿ ಸೇರಿದಂತೆ ಹಲವರು ಬಿಜೆಪಿ ತೊರೆದು ಶಾಸಕ ಶ್ರೀನಿವಾಸ ಮಾನೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಹಾನಗಲ್ಲ: ಹೇರೂರು ಗ್ರಾಮದ ಮುಖಂಡ ಮಲ್ಲಿಕಾರ್ಜುನ ಕಳ್ಳಿ ಸೇರಿದಂತೆ ಹಲವರು ಬಿಜೆಪಿ ತೊರೆದು ಶಾಸಕ ಶ್ರೀನಿವಾಸ ಮಾನೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ತತ್ವ, ಸಿದ್ಧಾಂತಗಳಿವೆ. ಕಾಂಗ್ರೆಸ್ ಆಡಳಿತ ನಡೆಸಿದ ಸಂದರ್ಭದಲ್ಲಿ ಎಲ್ಲ ವರ್ಗಗಳಿಗೆ ಸೇರಿದ ಬಂಧುಗಳು ನೆಮ್ಮದಿಯ ಜೀವನ ನಡೆಸಿದ್ದಾರೆ. ಬಡವರು, ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಾಕಷ್ಟು ಕಾರ್ಯಕ್ರಮ ರೂಪಿಸಿದ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸೇರಬೇಕಿದೆ ಎಂದು ಈ ಸಂದರ್ಭದಲ್ಲಿ ಹೇಳಿದ ಶಾಸಕ ಮಾನೆ, ತಾಲೂಕಿನಲ್ಲಿ ಅನೇಕ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿರುವುದರಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯರಾದ ಮಹದೇವಪ್ಪ ಬಾಗಸರ, ಕೊಟ್ರಪ್ಪ ಕುದರಿಸಿದ್ದನವರ, ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕ ಚಂದ್ರಪ್ಪ ಜಾಲಗಾರ, ಮುಖಂಡರಾದ ಬಸವರಾಜ ಹಾಲಭಾವಿ, ಯಲ್ಲಪ್ಪ ಕಲ್ಲೇರ, ಸತ್ತಾರಸಾಬ ಅರಳೇಶ್ವರ, ಮೆಹಬೂಬಅಲಿ ಬ್ಯಾಡಗಿ, ಯಾಸೀರ್‌ಅರಾಫತ್ ಮಕಾನದಾರ, ಭರಮಣ್ಣ ಶಿವೂರ, ಗೀತಾ ಪೂಜಾರ, ಅನಿತಾ ಶಿವೂರ, ಪ್ರಕಾಶ ಬಣಕಾರ, ಫಯಾಜ್ ಲೋಹಾರ, ವಸಂತ ವೆಂಕಟಾಪೂರ, ಮಧು ಪಾಣಿಗಟ್ಟಿ, ರಾಜೂ ಚವ್ಹಾಣ, ಕರಿಯಪ್ಪ ಗಂಟೇರ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಇದ್ದರು.