ಕಾಂಗ್ರೆಸ್, ಬಿಜೆಪಿ ತೊರೆದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆ

| N/A | Published : Sep 26 2025, 01:00 AM IST

ಕಾಂಗ್ರೆಸ್, ಬಿಜೆಪಿ ತೊರೆದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಲೋಕಸಭಾ ಸದಸ್ಯ ಎಚ್.ಡಿ.ಕುಮಾರಸ್ವಾಮಿ ಅವರ ಅಭಿವೃದ್ಧಿ ಕಾರ್ಯ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜನಪರ ಹೋರಾಟ ಮೆಚ್ಚಿ ಜೆಡಿಎಸ್ ಸೇರ್ಪಡೆಗೊಂಡಿರುವುದಾಗಿ ನಗರಕೆರೆ ಪ್ರಸನ್ನ ಸ್ಪಷ್ಟಪಡಿಸಿದರು.

 ಮದ್ದೂರು :  ತಾಲೂಕಿನ ನಗರಕೆರೆ ಗ್ರಾಮದ ಯುವ ಮುಖಂಡರಾದ ಪ್ರಸನ್ನ, ಡಿ.ಸಿ.ರವಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಬುಧವಾರ ಜೆಡಿಎಸ್ ಸೇರ್ಪಡೆಗೊಂಡರು.

ಪಟ್ಟಣದ ಲೀಲಾವತಿ ಬಡಾವಣೆಯ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಗರಕೆರೆ ಪ್ರಸನ್ನ, ಡಿ.ಸಿ.ರವಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ರೂಪ, ಗ್ರಾಮ ಪಂಚಾಯಿತಿ ಸದಸ್ಯೆ ಅನು, ನಾಗರಾಜು, ರಾಜಶೇಖರ, ಅನಂತ, ಶಿವಲಿಂಗಯ್ಯ, ಕುಮಾರ, ಶೇಖರ್ ಸೇರಿದಂತೆ ಹಲವು ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಮುಖಂಡರನ್ನು ಮಾಲಾರ್ಪಣೆ ಮಾಡಿ ಡಿ.ಸಿ. ತಮ್ಮಣ್ಣ ಸ್ವಾಗತಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಲೋಕಸಭಾ ಸದಸ್ಯ ಎಚ್.ಡಿ.ಕುಮಾರಸ್ವಾಮಿ ಅವರ ಅಭಿವೃದ್ಧಿ ಕಾರ್ಯ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜನಪರ ಹೋರಾಟ ಮೆಚ್ಚಿ ಜೆಡಿಎಸ್ ಸೇರ್ಪಡೆಗೊಂಡಿರುವುದಾಗಿ ನಗರಕೆರೆ ಪ್ರಸನ್ನ ಸ್ಪಷ್ಟಪಡಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮುಂಬರುವ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಲಿವೆ. ಕಾರ್ಯಕರ್ತರು ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಸಂಘಟನೆ ಯೊಂದಿಗೆ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ನಗರಸಭಾ ಸದಸ್ಯರಾದ ಮಹೇಶ್, ಪ್ರಿಯಾಂಕ, ಟಿಎಪಿಸಿಎಂಎಸ್ ನಿರ್ದೇಶಕ ಕೂಳೆಗೆರೆ ಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ರವಿ ಚನ್ನಸಂದ್ರ, ಮುಖಂಡರಾದ ಕೆ. ಟಿ.ರಾಜಣ್ಣ, ಅಪ್ಪು ಪಿ. ಗೌಡ ಮತ್ತಿತರರು ಇದ್ದರು.

Read more Articles on