ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ

| Published : Dec 31 2024, 01:00 AM IST

ಸಾರಾಂಶ

ಹಿಂದೂ ಸಂಘಟನೆಯ ಕಾರ್ಯಕರ್ತ ಅನಿಲ್ ಮುಲ್ಲಾಳ್ ಮೇಲೆ 20ಕ್ಕೂ ಹೆಚ್ಚು ಜನ ಸೇರಿಕೊಂಡು ಭೀಕರವಾಗಿ ಹಲ್ಲೆ

ಗದಗ: ಹಿಂದೂ ಸಂಘಟನೆಯ ಕಾರ್ಯಕರ್ತ ಅನಿಲ ಮುಲ್ಲಾಳ ಮೇಲೆ ಹಲ್ಲೆ ಖಂಡಿಸಿ, ವಿಡಿಯೋದಲ್ಲಿ ಹಿಂದೂಗಳನ್ನು ಭಯ ಬೀಳಿಸುವ, ಕೋಮುಗಲಭೆ ಸೃಷ್ಟಿಸುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕ್ರಾಂತಿ ಸೇನಾ ಸಂಘಟನೆ ವತಿಯಿಂದ ನಗರದ ಟಾಂಗಾಕೂಟನಲ್ಲಿ ಪ್ರತಿಭಟನೆ ನಡೆಸಿ ಪಾದಯಾತ್ರೆ ಮೂಲಕ ಶಹರ ಪೊಲೀಸ್ ಠಾಣೆಗೆ ತೆರಳಿ ಸಿಪಿಐಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾಧ್ಯಕ್ಷ ಬಾಬು ಬಾಕಳೆ ಮಾತನಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಅನಿಲ್ ಮುಲ್ಲಾಳ್ ಮೇಲೆ 20ಕ್ಕೂ ಹೆಚ್ಚು ಜನ ಸೇರಿಕೊಂಡು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಇದನ್ನು ಕ್ರಾಂತಿ ಸೇನಾ ಸಂಘಟನೆ ಹಾಗೂ ಹಿಂದೂ ಸಮಾಜ ಉಗ್ರವಾಗಿ ಖಂಡಿಸುತ್ತದೆ. ವಿಡಿಯೋದಲ್ಲಿ ಒಬ್ಬ ಮುಸ್ಲಿಂ ಯುವಕ ಪ್ರಚೋದನಕಾರಿ ಹೇಳಿಕೆ ನೀಡಿದ್ದು ಖಂಡನೀಯ ವಿಷಯವಾಗಿದೆ. ಇಂತಹ ದುಷ್ಕರ್ಮಿಗಳಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.

ಜಿಲ್ಲಾ ಗೌರವ ಕಾರ್ಯದರ್ಶಿ ಪ್ರವೀಣ ಹಬೀಬ ಮಾತನಾಡಿ, ಪ್ರಚೋದನಕಾರಿ ಹೇಳಿಕೆ ನೀಡಿರುವ ಮುಸ್ಲಿಂ ಯುವಕನ ವಿಡಿಯೋವನ್ನು ಸೂಕ್ತ ತನಿಖೆ ಮಾಡಿ ಎಲ್ಲರ ಮೇಲೂ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕೋಮುಗಲಭೆ ಸೃಷ್ಟಿಸುತ್ತಿರುವ ಮುಸ್ಲಿಂ ಗೂಂಡಾ ಗ್ಯಾಂಗ್ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಭೀಮಾ ಕಾಟಿಗಾರ್ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಶಿವಕುಮಾರ್ ಕುಂಬಾರ್, ಭರತ್ ಮಾರಪ್ಪನವರ, ಪವನ್ ಪುರದ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.