ಸಾರಾಂಶ
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜ ಒಡೆದು ಪರಸ್ಪರ ದ್ವೇಷ ಮತ್ತು ಅಸಹನೆ ಹುಟ್ಟು ಹಾಕಿರುವ ಕಾರಣಕ್ಕಾಗಿ ವಕೀಲ ರಾಕೇಶ್ ಕಿಶೋರ್ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕೆಂದು ಒತ್ತಾಯಿಸಿದರು.
ಕೋಲಾರ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆ ಖಂಡಿಸುತ್ತಾ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಲಯಕ್ಕೆ ಅಪಮಾನ ಮಾಡಿದ ಕಿಡಿಗೇಡಿ ವಕೀಲನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಜೈಭೀಮ್ ಶ್ರೀನಿವಾಸ್ ಒತ್ತಾಯಿಸಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಾಧೀಶ ಬಿ.ಆರ್.ಗವಾಯಿ ಸಾಮಾಜಿಕ ಪ್ರತಿರೋಧ ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು, ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ ೭೫ ವರ್ಷದ ನಂತರವೂ ಮನುವಾದಿಗಳ ಮನಸ್ಸಿನಲ್ಲಿ ಭದ್ರವಾಗಿ ಉಳಿದುಕೊಂಡಿರುವುದಕ್ಕೆ ಇಂದಿನ ಘಟನೆ ಸಾಕ್ಷಿ ಎಂದು ದೂರಿದರು. ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜ ಒಡೆದು ಪರಸ್ಪರ ದ್ವೇಷ ಮತ್ತು ಅಸಹನೆ ಹುಟ್ಟು ಹಾಕಿರುವ ಕಾರಣಕ್ಕಾಗಿ ವಕೀಲ ರಾಕೇಶ್ ಕಿಶೋರ್ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕೆಂದು ಒತ್ತಾಯಿಸಿದರು.