ಸಾರಾಂಶ
ಪ್ರಾಧಿಕಾರವು ಪ್ರತಿ ದಿನ ಸಾರ್ವಜನಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಮಾಜಿ ಸೈನಿಕರಿಗೆ ಹಾಗೂ ಅವರ ಕುಟುಂಬದವರಿಗೆ ಕಾನೂನು ಅರಿವು-ನೆರವಿನ ಕಾರ್ಯಕ್ರಮ ಆಯೋಜಿಸುತ್ತಿದೆ.
ಧಾರವಾಡ:
ದೇಶದ ಕಟ್ಟಕಡೆಯ ವ್ಯಕ್ತಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಉಚಿತ ಹಾಗೂ ಸಕ್ಷಮ ನ್ಯಾಯ ದೊರಕಿಸಿ ಕೊಡುವ ಉದ್ದೇಶವನ್ನು ಕಾನೂನು ಸೇವೆಗಳ ಪ್ರಾಧಿಕಾರ ಹೊಂದಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದಲ್ಲಿ ನಡೆದ ಕಾನೂನು ಅರಿವು-ನೆರವು ಅಭಿಯಾನದಲ್ಲಿ ಮಾತನಾಡಿದ ಅವರು, ಪ್ರಾಧಿಕಾರವು ಪ್ರತಿ ದಿನ ಸಾರ್ವಜನಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಮಾಜಿ ಸೈನಿಕರಿಗೆ ಹಾಗೂ ಅವರ ಕುಟುಂಬದವರಿಗೆ ಕಾನೂನು ಅರಿವು-ನೆರವಿನ ಕಾರ್ಯಕ್ರಮ ಆಯೋಜಿಸುತ್ತಿದೆ. ಪ್ಯಾನೆಲ್ ವಕೀಲರ ಮೂಲಕ ನ್ಯಾಯಾಲಯಗಳಲ್ಲಿ ಅವರ ಪರವಾಗಿ ಪ್ರಕರಣವನ್ನು ದಾಖಲಿಸಿ ಕಾನೂನಿನ ನೆರವನ್ನು ನೀಡುತ್ತಿದೆ ಎಂದರು.
ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಆಯೋಜಿಸಿ ವ್ಯಾಜ್ಯ ಪೂರ್ವ ಪ್ರಕರಣ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸುವಲ್ಲಿ ಪ್ರಾಧಿಕಾರ ಯಶಸ್ವಿಯಾಗಿದೆ. ಕಕ್ಷಿದಾರರಿಗೆ ಶೀಘ್ರ ನ್ಯಾಯ ದೊರಕಿಸಿ ಕೊಡುವಲ್ಲಿ ಪರಿಣಾಮಕಾರಿ ಮಹತ್ವದ ಹೆಜ್ಜೆ ಇರಿಸಿದೆ ಎಂದರು.ಕಾನೂನು ನೆರವು ಅಭಿರಕ್ಷಕ ಬಿ.ಎನ್. ಜಮಾದಾರ, ಕೇಂದ್ರ ಕಾರಾಗೃಹ ಅಧೀಕ್ಷ ಶಹಾಬುದ್ದೀನ್ ಕಾಲೆಖಾನ್, ಶಶಿರೇಖಾ ಮಾಳಗಿ ಹಾಗೂ ನೂರ್‌ಜಹಾನ್ ಕಿಲ್ಲೇದಾರ ಉಪನ್ಯಾಸಕರಾಗಿ ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))