Legal awareness is necessary for the youth.

: ನ್ಯಾ.ಜಿ.ಎಚ್ ಹನುಮಂತ ಅಭಿಮತ । ಸುರಕ್ಷತಾ ಬಾಲ್ಯ ಅಭಿಯಾನದಡಿ ಕಾನೂನು ಅರಿವು ಕಾರ್ಯಕ್ರಮ ಕನ್ನಡಪ್ರಭ ವಾರ್ತೆ ಭದ್ರಾವತಿ

ಭವಿಷ್ಯದ ಸಮಾಜಕ್ಕೆ ಇನ್ನೂ ಹೆಚ್ಚಿನ ಕಾನೂನಿನ ನೆರವು ಅಗತ್ಯ, ಈ ಹಿನ್ನಲೆಯಲ್ಲಿ ಯುವ ಸಮೂಹ ಕಾನೂನಿನ ಅರಿವು ತಿಳಿಯಬೇಕೆಂದು ನ್ಯಾ. ಜಿ.ಎಚ್. ಹನುಮಂತ ಹೇಳಿದರು.

ಅವರು ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಆಶ್ರಿತದ ನಗರದ ಹೊಸಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಬುಧವಾರ ಶಿವಮೊಗ್ಗ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಶಾಲಾ ಶಿಕ್ಷಣ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ಕ್ಲಬ್ ಗಳ ಮೂಲಕ ಸುರಕ್ಷತಾ ಬಾಲ್ಯ ಅಭಿಯಾನ ಅಡಿಯಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರಸ್ತುತ ಸಾಮಾಜಿಕ, ಆರ್ಥಿಕ ವ್ಯವಸ್ಥೆಗಳ ಹಾಗೂ ಶಿಕ್ಷಣದ ಅಗತ್ಯತೆ ಕುರಿತು ವಿವರಿಸಿದರು.

ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮಾತನಾಡಿ, ದೇಶದ ಸುರಕ್ಷಿತ ಭವಿಷ್ಯ ಕಟ್ಟುವಲ್ಲಿ ಸುರಕ್ಷಿತ ಬಾಲ್ಯದ ಅವಶ್ಯಕತೆ, ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆಗಳ ಬಗ್ಗೆ ಹಾಗೂ ಸೈಬರ್ ಸುರಕ್ಷತೆ, ಆನ್ಲೈನ್ ಗ್ಯಾಂಬಲಿಂಗ್, ಸೈಬರ್ ವಂಚನೆ, ಮಾರ್ಫಿಂಗ್ ಹಾಗೂ ಇನ್ನಿತರ ವಿಷಯಗಳ ಕುರಿತು ಅರಿವು ಮೂಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಸಿ. ಸುರೇಶ್ ಮಾತನಾಡಿ, 6 ರಿಂದ 14 ವಯೋಮಾನದ ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ, ಸದೃಢ ಬಾಲ್ಯಕ್ಕಾಗಿ ಹಾಗೂ ಜ್ಞಾನದ ಅಭಿವೃದ್ಧಿಗಾಗಿ ತಂತ್ರಜ್ಞಾನದ ಸಮರ್ಪಕ ಬಳಕೆಯ ಕುರಿತು ಮಾಹಿತಿ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಹಾಗೂ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಭವ್ಯ ಭಾರತದ ಸತ್ಪ್ರಜೆಗಳಾಗಲು ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಕನ್ನಡ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ರೇಣುಕಪ್ಪ, ಆಂಗ್ಲ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಎಂ. ಹೇಮಾವತಿ, ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಎಂ. ಆಂಜನೇಯ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯೆ ಮಮತಾ ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕಿ ಪಿ. ರೇವತಿ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕರಾದ ಎಂ. ಕವಿತಾ ಪ್ರಾರ್ಥಿಸಿ, ಬಿ. ಅಂಬಿಕಾ ಸ್ವಾಗತಿಸಿದರು.

ಡಿ28-ಬಿಡಿವಿಟಿ1

ಭದ್ರಾವತಿ ಹೊಸಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಸುರಕ್ಷಿತ ಬಾಲ್ಯ ಅಭಿಯಾನ ಅಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.