ಸಾರಾಂಶ
ಕನ್ನಡಪ್ರಭವಾರ್ತೆ ತಿಪಟೂರು
ದೇಶದ ಪ್ರತಿಯೊಬ್ಬ ನಾಗರಿಕನು ಕಾನೂನಿನ ಪ್ರಜ್ಞೆ ಬೆಳೆಸಿಕೊಂಡರೆ ಅಪರಾಧಗಳು ಕಡಿಮೆಯಾಗುತ್ತವೆ. ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಂಡರೆ ಉತ್ತಮ ಸಮಾಜಕ್ಕೆ ಭದ್ರಬುನಾದಿ ಹಾಕಿದಂತೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರಾದ ನೂರುನ್ನೀಸಾ ತಿಳಿಸಿದರು.ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕಲ್ಪತರು ತಂತ್ರಜ್ಞಾನ ಸಂಸ್ಥೆ ಹಾಗೂ ಕೆಎಲ್‌ಎ ಕಾನೂನು ಕಾಲೇಜು ವತಿಯಿಂದ ಆಯೋಜಿಸಿದ್ದ ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯವಾಗಿದ್ದು, ಅವುಗಳನ್ನು ಸರಿಯಾಗಿ ಪಾಲಿಸುವ ಮೂಲಕ ಗೌರವಿಸಬೇಕು ಎಂದರು. ಪೋಕ್ಸೋ ಕಾಯ್ದೆಯಡಿಯಲ್ಲಿ ಆರೋಪಿಸಲ್ಪಟ್ಟ ಯುವಕರನ್ನು ಒಳಗೊಂಡ ನಿಜ ಜೀವನದ ಪ್ರಕರಣಗಳನ್ನು ವಿವರಿಸಿ, ವಿದ್ಯಾರ್ಥಿಗಳಿಗೆ ಅಗತ್ಯ ಕಾನೂನುಗಳ ಬಗ್ಗೆ ಶಿಕ್ಷಣ ನೀಡುವುದು ಮತ್ತು ಕಾನೂನು ಸಾಕ್ಷರತೆಯನ್ನು ಉತ್ತೇಜಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕೆಐಟಿ ಪ್ರಾಂಶುಪಾಲ ಡಾ.ಎಚ್.ಸಿ ಸತೀಶ್ ಕುಮಾರ್, ಕೆಎಲ್‌ಎ ಕಾನೂನು ಕಾಲೇಜಿನ ಪ್ರಾಂಶುಪಾಲ ಹೆಚ್.ಎನ್ ಪ್ರಸನ್ನ, ಪ್ರಾಧ್ಯಾಪಕರ ಡಾ. ಎಚ್.ಎನ್ ಚಂದ್ರಕಲಾ ಸೇರಿದಂತೆ ಕೆಎಲ್‌ಎ ಮತ್ತು ಕೆಐಟಿ ಕಾಲೇಜಿನ ಎಲ್ಲಾ ಸಿಬ್ಬಂದಿಗಲು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))