ನೊಂದವರಿಗೆ ನಾಯ್ಯ ಒದಗಿಸುವ ಕಾನೂನು ಸೇವಾ ಕೇಂದ್ರ

| Published : May 02 2025, 12:09 AM IST

ನೊಂದವರಿಗೆ ನಾಯ್ಯ ಒದಗಿಸುವ ಕಾನೂನು ಸೇವಾ ಕೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವೃದ್ಧರು ಹಾಗೂ ಮೂರು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸಲಹಾ ಕೇಂದ್ರದಲ್ಲಿ ವಕೀಲರನ್ನು ನೇಮಿಸಲಾಗುವುದು. ಈ ಮೂಲಕ ತುಳಿತಕ್ಕೆ ಒಳಗಾದ ಹಾಗೂ ನೊಂದವರಿಗೆ ನ್ಯಾಯ ಒದಗಿಸಲಾಗುವುದು.

ಕನಕಗಿರಿ:

ಆರ್ಥಿಕವಾಗಿ ಹಿಂದುಳಿದ, ನೊಂದವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಅಧಿನಿಯಮದಡಿ ಸಲಹಾ ಕೇಂದ್ರ ಆರಂಭಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಗಾಣಿಗೇರ ಹೇಳಿದರು.

ಪಟ್ಟಣದ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಗಂಗಾವತಿ, ವಕೀಲರ ಸಂಘ ಗಂಗಾವತಿ, ಕಂದಾಯ ಇಲಾಖೆ ಕನಕಗಿರಿ, ತಾಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ಕಾನೂನು ಸಲಹಾ ಕೇಂದ್ರ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವೃದ್ಧರು ಹಾಗೂ ಮೂರು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸಲಹಾ ಕೇಂದ್ರದಲ್ಲಿ ವಕೀಲರನ್ನು ನೇಮಿಸಲಾಗುವುದು. ಈ ಮೂಲಕ ತುಳಿತಕ್ಕೆ ಒಳಗಾದ ಹಾಗೂ ನೊಂದವರಿಗೆ ನ್ಯಾಯ ಒದಗಿಸಲಾಗುವುದು. ಕೌನ್ಸೆಲಿಂಗ್ ಮೂಲಕ ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದರು.

ಗಂಡ-ಹೆಂಡತಿ ಜಗಳದಲ್ಲಿ ಮಕ್ಕಳ ಹಿತದೃಷ್ಟಿಯಿಂದ ಒಂದುಗೂಡಿಸಲಾಗುವುದು. ಅವರು ತಮಗೆ ಹಿರಿಯ ವಕೀಲರ ಅವಶ್ಯವಿದ್ದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಮೊರೆ ಹೋಗಿ ಕಾನೂನು ಸಲಹೆ ಪಡೆದುಕೊಳ್ಳಬಹುದಾಗಿದೆ. ನೊಂದ, ತುಳಿತಕ್ಕೊಳಗಾದ, ನಾನಾ ಪ್ರಕರಣಗಳಲ್ಲಿ ಸಂತ್ರಸ್ತರಾದವರು ಈ ಸಲಹಾ ಕೇಂದ್ರವನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಗಂಗಾವತಿ ವಕೀಲರ ಸಂಘದ ಅಧ್ಯಕ್ಷ ಶರಣಬಸಪ್ಪ ನಾಯಕ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ಪಪಂ ಅಧ್ಯಕ್ಷೆ ಹುಸೇನಬಿ ಚಳ್ಳಮರದ, ಉಪಾಧ್ಯಕ್ಷ ಕಂಠಿರಂಗಪ್ಪ ನಾಯಕ, ತಹಸೀಲ್ದಾರ್‌ ವಿಶ್ವನಾಥ ಮುರುಡಿ, ಸಿಡಿಪಿಒ ವಿರೂಪಾಕ್ಷ, ವಕೀಲರ ಸಂಘದ ಉಪಾಧ್ಯಕ್ಷ ಪ್ರಕಾಶ ಕುಸುಬಿ, ಸಂಘದ ಕಾರ್ಯದರ್ಶಿ ಮಂಜುನಾಥ, ಪ್ಯಾನಲ್‌ ವಕೀಲರಾದ ಶಿವಕುಮಾರ, ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಇದ್ದರು.