ವಿಧಾನ ಪರಿಷತ್ ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ

| Published : Oct 08 2024, 01:08 AM IST

ವಿಧಾನ ಪರಿಷತ್ ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಚುನಾವಣಾ ವೀಕ್ಷಕರಿಗೆ ಸಿದ್ಧತೆಗಳ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ 3,127 ಮಹಿಳಾ ಮತದಾರರು ಹಾಗೂ 2,905 ಪುರುಷ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಗಳ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕ ಪಂಕಜ್ ಕುಮಾರ್ ಪಾಂಡೆ ಸೋಮವಾರ ಪರಿಶೀಲಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿ ನೇಮಕ, ಮತಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ ಪಡೆದರು. ಮತಗಟ್ಟೆ ಸಿಬ್ಬಂದಿಗೆ ತರಬೇತಿ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಚುನಾವಣಾ ವೀಕ್ಷಕರಿಗೆ ಸಿದ್ಧತೆಗಳ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ 3,127 ಮಹಿಳಾ ಮತದಾರರು ಹಾಗೂ 2,905 ಪುರುಷ ಮತದಾರರು ಇದ್ದಾರೆ. ಮತ ಎಣಿಕೆಯು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಹೇಳಿದರು.

ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್ ಕೆ., ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್, ಉಡುಪಿ ಪೊಲೀಸ್ ಅಧೀಕ್ಷಕ ಅರುಣ್, ದ.ಕ ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್‌ ಕುಮಾರ್, ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಇದ್ದರು.