ಕೋಗಿಲೆ ಮನೆ ಗ್ರಾಮದ ದೊರೆರಾಜು ಎಂಬುವರು ತಮ್ಮ ಹಸುವನ್ನು ಹೊಲದಲ್ಲಿ ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ದೊಡ್ಡ ಗಾತ್ರದ ಚಿರತೆಯೊಂದು ಏಕಾಏಕಿ ಹಸುವಿನ ಮೇಲೆ ದಾಳಿ ಮಾಡಿ ಕೆಚ್ಚಲು ಹಾಗೂ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯ ಮಾಡಿದೆ. ಈ ಸಂದರ್ಭದಲ್ಲಿ ಅಕ್ಕಪಕ್ಕದವರು ಜೋರಾಗಿ ಕೂಗಿದ್ದರಿಂದ ಚಿರತೆ ಅಲ್ಲಿಂದ ಪಲಾಯನ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಹಸುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಮಹಜರು ನಡೆಸಿರುತ್ತಾರೆ.
ಕನ್ನಡಪ್ರಭ ವಾರ್ತೆ ಬೇಲೂರು
ತಾಲೂಕಿನ ಕೋಗಿಲೆ ಮನೆ ಬಳಿ ಚಿರತೆಯೊಂದು ಹಸುವಿನ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ.ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಕೋಗಿಲೆ ಮನೆ ಗ್ರಾಮದ ದೊರೆರಾಜು ಎಂಬುವರು ತಮ್ಮ ಹಸುವನ್ನು ಹೊಲದಲ್ಲಿ ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ದೊಡ್ಡ ಗಾತ್ರದ ಚಿರತೆಯೊಂದು ಏಕಾಏಕಿ ಹಸುವಿನ ಮೇಲೆ ದಾಳಿ ಮಾಡಿ ಕೆಚ್ಚಲು ಹಾಗೂ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯ ಮಾಡಿದೆ. ಈ ಸಂದರ್ಭದಲ್ಲಿ ಅಕ್ಕಪಕ್ಕದವರು ಜೋರಾಗಿ ಕೂಗಿದ್ದರಿಂದ ಚಿರತೆ ಅಲ್ಲಿಂದ ಪಲಾಯನ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಹಸುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಮಹಜರು ನಡೆಸಿರುತ್ತಾರೆ.
ಬಿಕ್ಕೋಡು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ ಈಗಾಗಲೇ ಆನೆಗಳ ಹಾವಳಿಯಿಂದ ರೈತರು ಸಾಕಷ್ಟು ನಷ್ಟವನ್ನು ಅನುಭವಿಸಿದ್ದಾರೆ. ಈಗ ಗಾಯದ ಮೇಲೆ ಬರೆ ಎಂಬಂತೆ ದೊಡ್ಡ ಗಾತ್ರದ ಚಿರತೆಯೊಂದು ಕಳೆದ ಮೂರು ದಿನಗಳಿಂದ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿದೆ. ಈಗಲಾದರೂ ಅರಣ್ಯ ಇಲಾಖೆಯವರು ಎಚ್ಚೆತ್ತು ಚಿರತೆಯನ್ನು ಹಿಡಿದು ರೈತರನ್ನು ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.