ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನನ್ನು ಭಕ್ಷಿಸಿದ ಚಿರತೆಯನ್ನು ಅರಣ್ಯ ಹಾಗೂ ಪೋಲಿಸ್ ಇಲಾಖೆ ಜಂಟಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನನ್ನು ಭಕ್ಷಿಸಿದ ಚಿರತೆಯನ್ನು ಅರಣ್ಯ ಹಾಗೂ ಪೋಲಿಸ್ ಇಲಾಖೆ ಜಂಟಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿರತೆ ಇರುವುದನ್ನು ಡ್ರೋಣ್ ಕ್ಯಾಮೆರಾ ಮೂಲಕ ಪತ್ತೆ ಹಚ್ಚಿಲಾಗಿತ್ತು. ಬೆಳಿಗ್ಗೆಯಿಂದಲೇ ಅಲ್ಲೇ ಓಡಾಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯಲು ಮಂಪರು ಬರುವ ಇಂಜೆಕ್ಷನ್ ನೀಡುವ ಮೂಲಕ ಚಿರತೆಯನ್ನು ಸೆರೆ ಹಿಡಿಯಲಾಗಿದೆ.ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮಾದಪ್ಪನ ಭಕ್ತನನ್ನು ಬೆಳಗಿನ ಜಾವ ಚಿರತೆ ಭಕ್ತನನ್ನು ಅರಣ್ಯ ಪ್ರದೇಶದಲ್ಲಿ ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮೂರು ದಿನಗಳ ಕಾಲ ಪಾದಯಾತ್ರಿಗಳಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಮೂರು ದಿನಗಳ ಕಾಲ ನಿರ್ಬಂಧ ಇರುವ ಮೂಲಕ ಚಿರತೆ ಸೆರೆ ಹಿಡಿಯಲು ಆದೇಶಿಸಿತ್ತು .ಅದರ ಅನ್ವಯ ಅರಣ್ಯಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಮತ್ತು ಚಿರತೆ ಸೆರೆಹಿಡಿಯುವ ತಂಡ ರಾತ್ರಿ 9:30 ರಲ್ಲಿ ಚಿರತೆಯನ್ನುಸೆರೆ ಹಿಡಿದಿದ್ದಾರೆ. ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.