ಸಾರಾಂಶ
ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮೇಲನಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸುತ್ತಮುತ್ತ ಸುಳಿದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ
ತುಮಕೂರು: ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮೇಲನಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸುತ್ತಮುತ್ತ ಸುಳಿದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ. ಚಿರತೆಯನ್ನು ಸೆರೆ ಹಿಡಿಯಲು ಬೋನ್ ವ್ಯವಸ್ಥೆ ಮಾಡಬೇಕೆಂಬ ಮನವಿ ಮೇರೆಗೆ ಸ್ಪಂದಿಸಿದ ಅರಣ್ಯ ಇಲಾಖೆಯಿಂದ ಇತ್ತೀಚೆಗೆ ಬೋನ್ ವ್ಯವಸ್ಥೆ ಮಾಡಿದ್ದರಿಂದ ಕಳೆದ ರಾತ್ರಿ ಚಿರತೆ ಸಿಕ್ಕಿಬಿದ್ದಿದೆ. ಇದರಿಂದ ವಸತಿ ಶಾಲೆಯ ಸುತ್ತ-ಮುತ್ತ ಚಿರತೆ ಕಾಣಿಸಿದ್ದರಿಂದ ಮಕ್ಕಳು ಹಾಗೂ ಶಿಕ್ಷಕರಲ್ಲಿದ್ದ ಆತಂಕ ದೂರವಾಗಿದೆ ಎಂದು ತಿಳಿಸಿದ್ದಾರೆ.