ರಸ್ತೆ ಕ್ರಾಸ್‌ ಮಾಡುವ ವೇಳೆ ಚಿರತೆ ಬಲಿ

| Published : Dec 07 2024, 12:32 AM IST

ಸಾರಾಂಶ

ಚಿಕ್ಕಮಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಸುಮಾರು ಐದು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇ ಬೋರನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.‌

ಚಿಕ್ಕಮಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಸುಮಾರು ಐದು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇ ಬೋರನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.‌

ಕಡೂರು- ಮಂಗಳೂರು (ರಾಷ್ಟ್ರೀಯ ಹೆದ್ದಾರಿ - 173) ರಸ್ತೆಯಲ್ಲಿ ಟಿಟಿ ವಾಹನಕ್ಕೆ ಸಿಲುಕಿ ಚಿರತೆ ಸಾವನಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಿರತೆ ರಸ್ತೆ ದಾಟುವಾಗ ಜಂಪ್ ಮಾಡುವಾಗ ಟಿಟಿ ವಾಹನಕ್ಕೆ ಸಿಲುಕಿದೆ ಎಂದು ಹೇಳಲಾಗಿದೆ.

ಚಿರತೆ ಜಂಪ್ ಮಾಡುವ ವೇಳೆಗೆ ಟಿಟಿ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿದೆ. ಒಂದು ವೇಳೆ, ಚಿರತೆ ಗ್ರಾಮದ ಒಳಕ್ಕೆ ನುಗ್ಗಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು.‌ ಆದರೆ, ಗ್ರಾಮದಿಂದ ಸುಮಾರು 300 ಮೀಟರ್‌ ದೂರದಲ್ಲಿ ಚಿರತೆ ರಸ್ತೆ ಕ್ರಾಸ್ ಮಾಡುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೋಟೋ ಫೈಲ್‌ ನೇಮ್‌ 6 ಕೆಸಿಕೆಎಂ 11ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಗ್ರಾಮದ ಬಳಿ ರಸ್ತೆ ದಾಟುವಾಗ ವಾಹನ ಡಿಕ್ಕಿಯಾಗಿ ಮೃತಪಟ್ಟಿರುವ ಚಿರತೆ.